ಸುಳ್ಯದಲ್ಲಿ ಲಾರಿ-ಕಾರು ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು, ಇಬ್ಬರಿಗೆ ಗಂಭೀರ ಗಾಯ

ಸುಳ್ಯ:ಕೊಡಗಿನ ಸಂಪಾಜೆ ಗ್ರಾಮದ ಕೊಯನಾಡು ಬಳಿ ಶುಕ್ರವಾರ ಲಾರಿ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಕಾರಿನಲ್ಲಿ ನಾಲ್ಕು ಜನರು ಪ್ರಯಾಣಿಸುತ್ತಿದ್ದರು. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.