Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಾಚೋಹಳ್ಳಿ ಬಳಿ ಭೀಕರ ಅಪಘಾತ: ಬೊಲೆರೋ – ಸ್ವಿಫ್ಟ್ ಕಾರು ನಡುವೆ ಸಂಭವಿಸಿದ ಡಿಕ್ಕಿಗೆ ಇಬ್ಬರು ಯುವಕರು ಸ್ಥಳದಲ್ಲೇ ಸಾವು!

Spread the love

ಬೆಂಗಳೂರು: ಬೆಂಗಳೂರು ಉತ್ತರ ತಾಲೂಕಿನ ಮಾಗಡಿ ರಸ್ತೆಯ ಮಾಚೋಹಳ್ಳಿ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ. ಚನ್ನರಾಯಪಟ್ಟಣ ಮೂಲದ ಗಗನ್ (27) ಮತ್ತು ದರ್ಶನ್ (26) ಮೃತಪಟ್ಟ ದುರ್ದೈವಿಗಳು. ಗಗನ್ ಮಾದನಾಯಕನಹಳ್ಳಿಯ ಖಾಸಗಿ ಬಾರ್ ಒಂದರಲ್ಲಿ ಕೆಲಸ ಮಾಡುತ್ತಿದ್ದರೆ, ದರ್ಶನ್ ಕೋಳಿ ಸಪ್ಲೈ ಮಾಡುವ ವಾಹನದ ಚಾಲಕನಾಗಿ ಕೆಲಸ ಮಾಡುತ್ತಿದ್ದನು.

ಇಬ್ಬರು ಸ್ನೇಹಿತರು ಎಲೆಕ್ಟ್ರಾನಿಕ್ ಸಿಟಿ ಬಳಿ ಇರುವ ತಮ್ಮ ಇನ್ನೊಬ್ಬ ಸ್ನೇಹಿತನ ರೂಮ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ, ಅತೀ ವೇಗವಾಗಿ ಬಂದ ಬೊಲೆರೋ ವಾಹನವು ಇವರು ಪ್ರಯಾಣಿಸುತ್ತಿದ್ದ ಸ್ವಿಫ್ಟ್ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣವಾಗಿ ಜಖಂಗೊಂಡಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಘಟನೆಯ ನಂತರ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ನೆಲಮಂಗಲ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *