ಟ್ರೈಲರ್ ಡಿಕ್ಕಿ: ಬಸ್ ನಿಲ್ದಾಣದಲ್ಲಿ ನಿಂತಿದ್ದ ತಾಯಿ, ಮಗಳಿಗೆ ಗಾಯ

ಮಂಗಳೂರು: ರಸ್ತೆ ಬದಿ ಬಸ್ ಗಾಗಿ ಕಾಯುತ್ತಿದ್ದ ತಾಯಿ, ಮಗಳಿಗೆ ಟ್ರೈಲರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರೂ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿಯ ಪಾವಂಜೆ ದೆವಸ್ಥಾನದ ಮುಂಭಾಗ ಶುಕ್ರವಾರ ಸಂಜೆ ನಡೆಸಿದೆ.ಗಾಯಗೊಂಡವರನ್ನು ಶಿಕ್ಷಕಿ ಕುಸುಮಾ ಮತ್ತು ಅವರ ಮಗಳು ಸುಮಲತಾ (14) ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಅವರು ಪಾವಂಜೆಯಲ್ಲಿ ನಿಂತು ಬಸ್ ಕಾಯುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿ ಕಡೆ ಸಂಚರಿಸುತ್ತಿದ ಟ್ರೈಲರ್ ಢಿಕ್ಕಿ ಹೊಡೆದಿದೆ.ಘಟನೆಯಿಂದ ಕುಸುಮಾ ಅವರಿಗೆ ಗಂಭೀರ ಗಾಯಗಳಾಗಿದ್ದು, ಸುಮಲತಾ ಅವರಿಗೆ ಅಲ್ಪ ಪ್ರಮಾಣದ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ನಿರೀಕ್ಷಕ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಟ್ರೈಲರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.