Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮೆಕ್ಸಿಕೋದಲ್ಲಿ ರೈಲು ಹಳಿತಪ್ಪಿ ದುರಂತ: 13 ಸಾವು

Spread the love

ಮೆಕ್ಸಿಕೋ ಸಿಟಿ: ದಕ್ಷಿಣ ಮೆಕ್ಸಿಕೋದಲ್ಲಿ ಭಾನುವಾರ ರೈಲೊಂದು ಹಳಿತಪ್ಪಿದ ಪರಿಣಾಮ ಕನಿಷ್ಠ 13 ಮಂದಿ ಸಾವನ್ನಪ್ಪಿದ್ದಾರೆ ಮತ್ತು 90 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಕ್ಸಾಕಾ ಮತ್ತು ವೆರಾಕ್ರೂಜ್ ರಾಜ್ಯಗಳ ಗಡಿಯ ಸಮೀಪವಿರುವ ನಿಝಾಂಡಾ ಪಟ್ಟಣದ ಬಳಿಯ ತಿರುವಿನಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಓಕ್ಸಾಕಾ ಗವರ್ನರ್ ಸಲೋಮನ್ ಜಾರಾ ತಿಳಿಸಿದ್ದಾರೆ.

ಅಪಘಾತದ ಸಮಯದಲ್ಲಿ ರೈಲಿನಲ್ಲಿ 241 ಪ್ರಯಾಣಿಕರು ಮತ್ತು ಒಂಬತ್ತು ಸಿಬ್ಬಂದಿ ಇದ್ದರು ಎಂದು ತಿಳಿದುಬಂದಿದೆ. ಪೆಸಿಫಿಕ್ ಮತ್ತು ಅಟ್ಲಾಂಟಿಕ್ ಸಾಗರಗಳನ್ನು ಸಂಪರ್ಕಿಸುವ ಈ ರೈಲು ಮಾರ್ಗವನ್ನು ಕಳೆದ ವರ್ಷವಷ್ಟೇ ಉದ್ಘಾಟಿಸಲಾಗಿತ್ತು.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ವರದಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *