ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ; ಗೋಜುಬಾವಿ ಗ್ರಾಮದ ಬಳಿ ಸಂಭವಿಸಿದ ದುರ್ಘಟನೆ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯ ಗೋಜುಬಾವಿ ಗ್ರಾಮದಲ್ಲಿ ಬುಧವಾರ ಎರಡು ಆಸನಗಳ ತರಬೇತಿ ವಿಮಾನವೊಂದು ಪತನಗೊಂಡಿದೆ ಎಂದು News18 ವರದಿ ಮಾಡಿದೆ.
ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಘಟನೆಯಲ್ಲಿ ಸಾವುನೋವು ಸಂಭವಿಸಿದೆಯೇ ಎಂದು ತಿಳಿದು ಬಂದಿಲ್ಲ. ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ.
ಕೆಲವು ತಿಂಗಳುಗಳ ಹಿಂದೆ ಇದೇ ಪ್ರದೇಶದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನವೂ ಅಪಘಾತಕ್ಕೀಡಾಗಿತ್ತು.
