Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಹಲ್ಗಾಮ್ ದಾಳಿಗೆ ಎರಡು ಬಾರಿ ಹೊಣೆ ಹೊತ್ತ ಟಿಆರ್‌ಎಫ್: ಯುಎನ್‌ಎಸ್‌ಸಿ ಭಯೊತ್ಪಾದನೆ ವರದಿ ಬಹಿರಂಗ

Spread the love

ನವದೆಹಲಿ: ವಿಶ್ವಸಂಸ್ಥೆಯ ಭದ್ರತಾ ಮಂಡಳಿ (UNSC – ಯುನೈಟೆಡ್ ನೇಷನ್ಸ್ ಸೆಕ್ಯುರಿಟಿ ಕೌನ್ಸಿಲ್) ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯೊಂದು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ಹೊಣೆಯನ್ನ ಉಗ್ರ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ಎರಡು ಬಾರಿ ಹೊತ್ತುಕೊಂಡಿದೆ ಎಂದು ಬಹಿರಂಗಪಡಿಸಲಾಗಿದೆ.

ಈ ದಾಳಿಯ ಸ್ಥಳದ ಛಾಯಾಚಿತ್ರಗಳನ್ನ ಟಿಆರ್‌ಎಫ್‌ ತನ್ನ ಸೋಷಿಯಲ್‌ ಮೀಡಿಯಾಗಳಲ್ಲಿ ಪ್ರಕಟಿಸಿದ್ದು, ಈ ಕೃತ್ಯವನ್ನ ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ ಬೆಂಬಲ ಇಲ್ಲದೇ ಮಾಡಲು ಸಾಧ್ಯವಿಲ್ಲ ಎಂದು ವರದಿ ತಿಳಿಸಿದೆ. ಅಲ್ಲದೇ ಟಿಆರ್‌ಎಫ್‌ನ ಕಾರ್ಯತಂತ್ರದ ಬಗ್ಗೆಯೂ ವರದಿಯಲ್ಲಿ ವಿವರವಾಗಿ ತಿಳಿಸಲಾಗಿದೆ

ಸಂಘಟನೆಯು ದಾಳಿಯ ಫೋಟೊಗಳನ್ನು ಪ್ರಕಟಿಸುವ ಮೂಲಕ ತನ್ನ ಉಪಸ್ಥಿತಿಯನ್ನ ಖಚಿತಪಡಿಸಲ ಮತ್ತು ಭಯದ ವಾತಾವರಣ ಸೃಷ್ಟಿಸಲು ಯತ್ನಿಸಿದೆ. ಈ ದಾಳಿಯ ಜವಾಬ್ದಾರಿಯನ್ನ ಎರಡು ಬಾರಿ ಹೇಳಿಕೊಂಡಿರುವುದು, ಸಂಘಟನೆಯ ಉದ್ದೇಶಿತ ಯೋಜನೆಯ ಭಾಗವಾಗಿದೆ ಎಂಬ ಅಂಶವನ್ನು ಯುಎನ್‌ಎಸ್‌ಸಿ ಗಮನಿಸಿದೆ. ಇದರೊಂದಿಗೆ ಟಿಆರ್‌ಎಫ್‌ನ ಈ ಕೃತ್ಯವು ಸ್ಥಳೀಯ ಜನತೆ ಮತ್ತು ಪ್ರವಾಸಿಗರಲ್ಲಿ ಭಯ ಹುಟ್ಟಿಸುವ ಉದ್ದೇಶ ಹೊಂದಿತ್ತು ಎಂಬುದು ಸ್ಪಷ್ಟವಾಗಿದೆ ಎಂಬುದಾಗಿ ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *