Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ತುಮಕೂರಿನಲ್ಲಿ ತ್ರಿಬಲ್ ರೈಡಿಂಗ್ ದುರಂತ:ಮೂವರು ಸೆಕ್ಯೂರಿಟಿ ಸಿಬ್ಬಂದಿ ಸಾವು

Spread the love

ತುಮಕೂರು: ತುಮಕೂರು  ಗ್ರಾಮಾಂತರ ವ್ಯಾಪ್ತಿಯ ಹಿರೇಹಳ್ಳಿ ಸಮೀಪದ ನಂದಿಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಕಂಟೈನರ್ ಲಾರಿಗೆ ಬೈಕ್ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ. ಶುಕ್ರವಾರ ಬೆಳಗ್ಗೆ ಅಪಘಾತ ಸಂಭವಿಸಿದೆ. ಬಂಕ್​​ನಿಂದ ಪೆಟ್ರೋಲ್ ತುಂಬಿಸಿಕೊಂಡು ಹೆದ್ದಾರಿಗೆ ಬರುತ್ತಿದ್ದ ಕಂಟೈನರ್​​​​ ಲಾರಿಗೆ ಬೈಕ್​​ ಡಿಕ್ಕಿ ಹೊಡೆದಿದೆ. ಬೈಕ್​ನಲ್ಲಿ ತ್ರಿಬಲ್ ರೈಡ್ ಹೋಗುತ್ತಿದ್ದ ಸವಾರರು ಮೃತಪಟ್ಟಿದ್ದಾರೆ. ಕ್ಯಾತಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಎಎಸ್​​​ಪಿ ಗೋಪಾಲ್, ಡಿವೈಎಸ್​​ಪಿ ಚಂದ್ರಶೇಖರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತದಲ್ಲಿ ಮೃತಪಟ್ಟವರನ್ನು ರಾಜೇಶ್ (25), ದನಂಜಯ್ (27), ಧನುಷ್ (23) ಎಂದು ಗುರುತಿಸಲಾಗಿದೆ. ಇವರು ದಾಬಸ್ ಪೇಟೆಯ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.ರಾತ್ರಿ ಪಾಳಿ ಮುಗಿಸಿ ತುಮಕೂರಿಗೆ ವಾಪಸಾಗುವಾಗ ಅಪಘಾತ ಸಂಭವಿಸಿದೆ. ಸದ್ಯ, ಮೃತದೇಹಗಳನ್ನು ಜಿಲ್ಲಾಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *