Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಟಿವಿ ಸೌಂಡ್ ವಿಚಾರಕ್ಕೆ ಶುರುವಾದ ಜಗಳ ಕೊ*ಲೆಯಲ್ಲಿ ಅಂತ್ಯ! ಪತಿಯನ್ನೇ ಕೊಂದ ಪತ್ನಿ!

Spread the love

ಅಮರಾವತಿ : ಆಂಧ್ರಪ್ರದೇಶದಲ್ಲಿ ಒಂದು ಶಾಕಿಂಗ್ ಘಟನೆ ನಡೆದಿದೆ. ಮನೆಯಲ್ಲಿ ಟಿವಿ ಸೌಂಡ್ ಕಡಿಮೆ ಮಾಡಲು ಹೇಳಿದ್ದಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯನ್ನು ಪತ್ನಿಯೇ ಚಾಕುವಿನಿಂದ ಇರಿದು ಕೊಂದಿದ್ದಾಳೆ.

ಟಿವಿ ವಾಲ್ಯೂಮ್ ಕಡಿಮೆ ಮಾಡು ಅಂದಿದ್ದೇ ತಪ್ಪಾಯ್ತು!

ಮೃತಪಟ್ಟ ವ್ಯಕ್ತಿಯನ್ನು 27 ವರ್ಷದ ಶೇಖ್ ಅಹ್ಮದ್ ಎಂದು ಗುರುತಿಸಲಾಗಿದೆ. ಎಸಿ ಮೆಕ್ಯಾನಿಕ್ ಆಗಿದ್ದ ಅಹ್ಮದ್, ಮಂಗಳಗಿರಿಯ ಟಿಡ್ಕೋ ಹೌಸಿಂಗ್ ಕಾಲೋನಿಯಲ್ಲಿ ಪತ್ನಿ ಜೊತೆ ವಾಸವಾಗಿದ್ದರು. ಟಿವಿ ವಾಲ್ಯೂಮ್ ಕಡಿಮೆ ಮಾಡುವಂತೆ ಅಹ್ಮದ್ ತನ್ನ ಪತ್ನಿಗೆ ಹೇಳಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಶುರುವಾಗಿದೆ.

ಚಿಕಿತ್ಸೆ ಫಲಕಾರಿಯಾಗದೆ ಸಾವು

ಮಾತಿಗೆ ಮಾತು ಬೆಳೆದು, ಜಗಳ ತಾರಕಕ್ಕೇರಿದಾಗ ಪತ್ನಿ ಚಾಕುವಿನಿಂದ ಅಹ್ಮದ್‌ಗೆ ಇರಿದಿದ್ದಾಳೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಅಕ್ಕಪಕ್ಕದವರು ಅಹ್ಮದ್‌ನನ್ನು ವಿಜಯವಾಡದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.  


Spread the love
Share:

administrator

Leave a Reply

Your email address will not be published. Required fields are marked *