Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಭೀಮನ ಅಮಾವಾಸ್ಯೆ ದಿನ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್

Spread the love

ಬೆಂಗಳೂರು:ಭೀಮನ ಅಮಾವಾಸ್ಯೆಯಂದು ಪತಿಗೆ ಭಕ್ತಿಯಿಂದ ಪೂಜೆ ಮಾಡಿ ಪತ್ನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದ ಘಟನೆ ಬೆಂಗಳೂರಿನ ಉತ್ತರ ತಾಲೂಕಿನ ಅಂಚೆಪಾಳ್ಯ ಗ್ರಾಮದಲ್ಲಿ ಕಳೆದ ಗುರುವಾರ ಈ ಘಟನೆ ನಡೆದಿತ್ತು. ಇದೀಗ ಈ ಒಂದು ಪ್ರಕರಣಕ್ಕೆ ಮತ್ತೊಂದು ತಿರುಗು ಸಿಕ್ಕಿದ್ದು ಪತಿಗೆ ಅನೈತಿಕ ಸಂಬಂಧ ಇತ್ತು ಎಂದು ಕ್ಷಮಿಸಿ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಆತ್ಮಹತ್ಯೆಗೆ ಶರಣಾದ ಮಹಿಳೆಯನ್ನು ಸ್ಪಂದನಾ (24) ಎಂದು ತಿಳಿದುಬಂದಿದೆ.ಸ್ಪಂದನಾ ಕಾಲೇಜಿಗೆ ಹೋಗುತ್ತಿದ್ದ ಸಮಯದಲ್ಲಿ ಅಭಿಷೇಕ್ ಎಂಬಾತನನ್ನು ಪ್ರೀತಿಸಿ ರಿಜಿಸ್ಟರ್ ಮ್ಯಾರೇಜ್ ಆಗಿದ್ದಳು. ಸ್ಪಂದನಾ ಪೋಷಕರ ವಿರೋಧದ ನಡುವೆಯೇ ಇಬ್ಬರು ಮದುವೆಯಾಗಿದ್ದರು.ಹಲವು ದಿನಗಳಿಂದ ಅಭಿಷೇಕ್‌ಗೆ ಅಪರಿಚಿತ ಯುವತಿಯೊಬ್ಬಳು ಕರೆ ಮಾಡುತ್ತಿದ್ದಳು. ಹೀಗಾಗಿ ಅಭಿಷೇಕ್ ಕೂಡ ಆ ಯುವತಿ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಸ್ಪಂದನಾಗೆ ಶಂಕೆ ವ್ಯಕ್ತವಾಗಿತ್ತು.

ಜೊತೆಗೆ ಇದೇ ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಹಲವು ಬಾರಿ ಗಲಾಟೆಯಾಗಿತ್ತು. ಆ ಸಮಯದಲ್ಲಿ ಇನ್ಮುಂದೆ ಆಕೆಯ ಜೊತೆಗೆ ಮಾತಾಡುವುದಿಲ್ಲ ಎಂದು ಅಭಿಷೇಕ್ ಹೇಳಿದ್ದ. ಆದರೆ ಮೊನ್ನೆ ಭೀಮನ ಅಮಾವಾಸ್ಯೆ ದಿನ ಸ್ಪಂದನಾ ಪತಿ ಅಭಿಷೇಕ್‌ಗೆ ಪೂಜೆ ಮಾಡುವ ವೇಳೆಯೇ ಆ ಯುವತಿಯಿಂದ ಮತ್ತೆ ಕರೆ ಬಂದಿತ್ತು. ಇದರಿಂದ ನೊಂದ ಸ್ಪಂದನಾ ಕೋಣೆಗೆ ಹೋಗಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರ ತನಿಖೆ ವೇಳೆ ಗೊತ್ತಾಗಿದೆ.

ಇದಕ್ಕೂ ಮುನ್ನ, ಮದುವೆಯಾದ ಬಳಿಕ ಪತಿ ಕುಟುಂಬಸ್ಥರು ವರದಕ್ಷಿಣೆ ತರುವಂತೆ ಕಿರುಕುಳ ಸ್ಪಂದನಾ ನೀಡುತ್ತಿದ್ದರು. ಬಳಿಕ 5 ಲಕ್ಷ ರೂ. ಹಣವನ್ನ ಕೊಟ್ಟು ರಾಜಿ ಸಂಧಾನ ಮಾಡಿಸಿದ್ದರು ಎನ್ನಲಾಗಿತ್ತು. ಅತ್ತೆ ಮಾತನ್ನ ಕೇಳಿ ನನ್ನ ಗಂಡ ಕಿರುಕುಳ ಕೊಡ್ತಿದ್ದಾನೆ ಎಂದು ತಂದೆಗೆ ಕರೆ ಮಾಡಿ ಸ್ಪಂದನಾ ಕಣ್ಣೀರಿಟ್ಟಿದ್ದಳು. ಸ್ವಲ್ಪ ಹೊತ್ತು ಬಿಟ್ಟು ಮತ್ತೆ ಕರೆ ಮಾಡಿ ನಿಮ್ಮ ಮಗಳು ಸಾವನ್ನಪ್ಪಿದ್ದಾಳೆ ಎಂದು ಪತಿ ಕುಟುಂಬಸ್ಥರು ತಿಳಿಸಿದ್ದರು. ಇದೀಗ ಸ್ಪಂದನ ಪತಿ ಅಭಿಷೇಕ್ ವಿರುದ್ಧ ಕುಟುಂಬಸ್ಥರು ನೀಡಿದ್ದು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *