ಮದುವೆ ಮನೆಗೆ ಬಂದ ಇಬ್ಬರು ಅಪ್ರಾಪ್ತ ಬಾಲಕಿಯರ ಅಪಹರಣ: ನಿರ್ಜನದಲ್ಲಿ ಸಾಮೂಹಿಕ ಅತ್ಯಾಚಾರ
ಒಡಿಶಾ : ಮದುವೆ ಮನೆಗೆ ಬಂದಿದ್ದ ಇಬ್ಬರು ಅಪ್ರಾಪ್ತ ಬಾಲಕಿಯರನ್ನು ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಒಡಿಶಾದ ಗಂಜಾಂನಲ್ಲಿ ನಡೆದಿದೆ.
ಜೂನ್ 3ರಂದು ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳು ಮದುವೆ ಸಮಾರಂಭವೊಂದರಲ್ಲಿ ಭಾಗವಹಿಸಿದ್ದರು.
ಈ ವೇಳೆ ಬಾಲಕಿಯರ ಪರಿಚಯಸ್ಥನೋರ್ವ ತನ್ನ ಮೂರು ಜನ ಸ್ನೇಹಿತರೊಂದಿಗೆ ಸೇರಿ ಮದುವೆ ಮನೆಯಿಂದಲೇ ಅಪಹರಿಸಿ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.
ಪ್ರಾಥಮಿಕ ತನಿಖೆಯಲ್ಲಿ ಹುಡುಗಿಯರಿಗೆ ಮೊದಲು ಇಬ್ಬರು ಪುರುಷರು ಆಮಿಷವೊಡ್ಡಿದ್ದಾರೆ, ಈ ಪೈಕಿ ಒಬ್ಬ ಆರೋಪಿ ಸಂತ್ರಸ್ತೆಗೆ ಪರಿಚಯವಿದ್ದ ಎನ್ನಲಾಗಿದೆ. ಬಳಿಕ ಆ ಇಬ್ಬರೊಂದಿಗೆ ಇನ್ನಿಬ್ಬರು ಸೇರಿಕೊಂಡು ಬಾಲಕಿಯರನ್ನು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೂನ್ 4 ರಂದು ಸಂತ್ರಸ್ತೆಯರ ಪೋಷಕರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸದ್ಯ ಬಾಲಕಿಯರನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಕೌನ್ಸೆಲಿಂಗ್ಗಾಗಿ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಲಾಗಿದೆ.