Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕಾಲ್ತುಳಿತ ಪ್ರಕರಣದಲ್ಲಿ ಆರ್‌ಸಿಬಿ ವಿರುದ್ಧ ಮತ್ತೆರಡು ಎಫ್‌ಐಆರ್: ನಾಲ್ವರು ಬಂಧನ

Spread the love

ಬೆಂಗಳೂರು: ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ನಡೆದ ಕಾಲ್ತುತಿಳಿತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ. 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಂಭ್ರಮಾಚರಣೆಗೆ ಸೂತಕ ಅಂಟಿಕೊಂಡಿದೆ. ಈ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಕಬ್ಬನ್​ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೆ ಎರಡು ಪ್ರಕರಣ ದಾಖಲಾಗಿವೆ. ಕಾಲ್ತುಳಿತದಲ್ಲಿ ಗಾಯಗೊಂಡ ರೋಲನ್ ಗೊಮೆಸ್ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಆರ್​ಸಿಬಿ ಫ್ರಾಂಚೈಸಿ, ಕೆಎಸ್​ಸಿಎ ಮತ್ತು ಡಿಎನ್​ಎ ಕಂಪನಿ ವಿರುದ್ಧ ಬಿಎನ್​ಎಸ್​​ ಕಾಯ್ದೆ 2023 (U/s-125(a)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಜಾಲತಾಣದಲ್ಲಿ ಆರ್​ಸಿಬಿ ಪೋಸ್ಟ್​ ನೋಡಿ ನನ್ನ ಗೆಳೆಯರ ಜೊತೆ ಸಂಭ್ರಮಾಚರಣೆ ವೀಕ್ಷಿಸಲು ಬಂದಿದ್ದೆ. ತೆರದ ಬಸ್ ಮೂಲಕ ಮೆರಬಣಿಗೆ ಇದೆ ಎಂದು ತಿಳಿಸಲಾಗಿತ್ತು. ಗೇಟ್ ನಂಬರ್ 17ರಲ್ಲಿ ನಾನು ಹೋಗುವಾಗ ನೂಕುನುಗ್ಗಲು‌ ಆಯ್ತು. ಈ ವೇಳೆ ನನ್ನ ತೋಳಿಗೆ ಪೆಟ್ಟಾಗಿದೆ ಎಂದು ಗಾಯಾಳು ರೋಲನ್ ಗೊಮೆಸ್ ದೂರು ನೀಡಿದ್ದಾರೆ.

ಪ್ರಕರಣ ಸಂಬಂಧ ನಾಲ್ವರ ಬಂಧನ

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆರ್​ಸಿಬಿ ವಿರುದ್ಧ ಈಗಾಗಲೆ ಒಂದು ಎಫ್​ಐಆರ್​ ದಾಖಲಾಗಿತ್ತು. ಈಗ, ಗಾಯಾಳು ನೀಡಿದ ದೂರಿನ ಆಧಾರದ ಮೇಲೆ ಮತ್ತೇರಡು ಎಫ್​ಐಆರ್​ ದಾಖಲಾಗಿವೆ.

ಕಬ್ಬನ್ ಪಾರ್ಕ್ ಇನ್ಸ್​ಪೆಕ್ಟರ್ ಗಿರೀಶ್ ದೂರು ನೀಡಿದ್ದ ದೂರಿನ ಆಧಾರದ ಮೇಲೆ ಬಿಎನ್​ಎಸ್​ ಸೆಕ್ಷನ್ 105, 115, 118ರಡಿ ಮೊಕದ್ದಮೆ ದಾಖಲಾಗಿದೆ. ಆರ್​ಸಿಬಿ ಮ್ಯಾನೇಜ್ಮೆಂಟ್ A-1 ಆಗಿದ್ದರೆ, ಕಾರ್ಯಕ್ರಮ ಆಯೋಜನೆ ಮಾಡಿದ್ದ DNA ಇವೆಂಟ್ ಮ್ಯಾನೇಜ್ಮೆಂಟ್ ಸಂಸ್ಥೆ A-2 ಆಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್​ನ A3 ಯನ್ನಾಗಿ ಮಾಡಿ ಎಫ್​ಐಆರ್ ದಾಖಲಿಸಲಾಗಿದೆ. ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ಸೇರಿ ನಾಲ್ವರನ್ನು ಬಂಧಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *