ರಾಜೀವ್ ಗೌಡ ಪತ್ತೆಗೆ ಎರಡು ವಿಶೇಷ ತಂಡ ರಚನೆ!

ಚಿಕ್ಕಬಳ್ಳಾಪುರ: ರಸ್ತೆಯಲ್ಲಿ ಅಕ್ರಮವಾಗಿ ಅಳವಡಿಸಿದ್ದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆಗೆ ಅಶ್ಲೀಲವಾಗಿ, ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಕಾಂಗ್ರೆಸ್ (Congress) ಮುಖಂಡ ರಾಜೀವ್ ಗೌಡ(rajeev gowda) ವಿರುದ್ಧ ಎಫ್ಐಆರ್ ದಾಖಲಾಗಿದೆ

ರಡು ದಿನಗಳಿಂದ ರಾಜೀವ್ ಗೌಡ (Rajeev Gowda) ತಲೆಮರೆಸಿಕೊಂಡಿದ್ದು, ಫೋನ್ ಸ್ವಿಚ್‌ಆಫ್ ಮಾಡಿಕೊಂಡಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಪೊಲೀಸರು 3 ತಂಡ ರಚನೆ ಮಾಡಿದ್ದಾರೆ. ಗುರುವಾರ ರಾಜೀವ್ ಗೌಡ ಮನೆ, ಸಂಬಂಧಿಕರು, ಸ್ನೇಹಿತರ ಮನೆಗಳಲ್ಲಿ ಶೋಧ ನಡೆಸಲಾಯಿತು.
ರಾಜೀವ್ ಗೌಡ ಅಜ್ಞಾತ ಸ್ಥಳದಲ್ಲಿದ್ದುಕೊಂಡು ನಿರೀಕ್ಷಣಾ ಜಾಮೀನಿಗೆ ತಯಾರಿ ನಡೆಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಹೀಗಿರುವಾಗ್ಲೇ ಸಂಜಯ್ ನಗರದ ರಾಜೀವ್ ಗೌಡ ನಿವಾಸಕ್ಕೆ ಸಂಜೆ ವೇಳೆ ಶಿಡ್ಲಘಟ್ಟ ಪೊಲೀಸ್ರು ಬಂದಿದ್ದರು. ಇನ್ಸ್ ಪೆಕ್ಟರ್ ಆನಂದ್ ಕುಮಾರ್ ಅಂಡ್ ಟೀಂ ಈತನ ಮನೆಯಲ್ಲೆಲ್ಲ ಈತನಿಗಾಗಿ ಹುಡುಕಾಟ ನಡೆಸಿದೆ.

ರಾಜೀವ್ ಗೌಡರ ಪತ್ತೆಗೆ ವಿಶೇಷ ತಂಡ!
ರಾಜೀವ್ ಗೌಡರನ್ನು ಬಂಧಿಸಲು ಪೊಲೀಸರು 3 ತಂಡ ರಚನೆ ಮಾಡಿ ಹುಡುಕಾಡುತ್ತಿದ್ದಾರೆ. ಇನ್ನೊಂದು ಕಡೆ ಮುಜುಗರದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಹೈಕಮಾಂಡ್ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಬಳಿ ಪ್ರಕರಣದ ಮಾಹಿತಿ ಕೇಳಿ ಎಂಬುದು ಕಾಂಗ್ರೆಸ್ ಉನ್ನತ ಮೂಲಗಳಿಂದ ತಿಳಿದುಬಂದಿದೆ. ಕೆಪಿಸಿಸಿ ರಾಜೀವ್ ಗೌಡಗೆ ನೋಟಿಸ್ ನೀಡಿದ್ದು, ವಾರದೊಳಗೆ ಸೂಕ್ತ ಉತ್ತರ ನೀಡದಿದ್ದರೆ ಶಿಸ್ತುಕ್ರಮದ ಎಚ್ಚರಿಕೆ ನೀಡಿದೆ.
ರಾಜೀವ್ ಗೌಡ ವಿರುದ್ಧ ಇದೆ 9 ಕ್ರಿಮಿನಲ್ ಕೇಸ್
ಈ ಮಧ್ಯೆ, ಪೊಲೀಸರು ರಾಜೀವ್ ಗೌಡನ ಕ್ರಿಮಿನಲ್ ಇತಿಹಾಸ ಕೆದಕಲು ಶುರುಮಾಡಿದ್ದಾರೆ. ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಈವರೆಗೆ 9 ಕೇಸ್ ಕೇಸ್ ದಾಖಲಾಗಿರುವುದು ಬಯಲಾಗಿದೆ. ಶಿಡ್ಲಘಟ್ಟ ನಗರ, ಹೊಸಕೋಟೆ, ದೇವನಹಳ್ಳಿ ಸೇರಿ ಬೆಂಗಳೂರಲ್ಲಿ ಕೇಸ್‌ಗಳಿವೆ. ರಿಯಲ್ ಎಸ್ಟೇಟ್‌ನಲ್ಲಿ ಮೋಸ, ವಂಚನೆ ಸೇರಿ ವಿವಿಧ ಪ್ರಕರಣಗಳು ದಾಖಲಾಗಿದ್ದ ಬಗ್ಗೆ ‘ಟಿವಿ9’ಗೆ ಪೊಲೀಸ್ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಯಾವ ಬಿಎನ್‌ಎಸ್ ಸೆಕ್ಷನ್ ಅಡಿ ಕೇಸ್?
132 – ಸರ್ಕಾರಿ ಕೆಲಸಕ್ಕೆ ಅಡ್ಡಿ ಹಾಗೂ ಬೆದರಿಕೆ
351(3) – ಸರ್ಕಾರಿ ಕಚೇರಿಗೆ ಬೆಂಕಿ ಹಚ್ಚುವ ಬೆದರಿಕೆ, ಮಹಿಳೆಯ ಚಾರಿತ್ರ್ಯವಧೆ
56 – ಅಪರಾಧಕ್ಕೆ ಪ್ರಚೋದನೆ ಅಥವಾ ಪ್ರೇರಣೆ
224 – ಸರ್ಕಾರಿ ನೌಕರನಿಗೆ ದೈಹಿಕ ಅಥವಾ ಮಾನಸಿಕವಾಗಿ ಗಾಯ ಮಾಡುವ ಬೆದರಿಕೆ
352 – ಶಾಂತಿ ಭಂಗಕ್ಕೆ ಪ್ರಚೋದನೆ ನೀಡುವ ಉದ್ದೇಶದಿಂದ ಅವಮಾನ