ಎಸ್ಎಸ್ಎಲ್ಸಿ ಪರೀಕ್ಷೆಗೆ ಹೋಗುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಚಲಿಸುತ್ತಿದ್ದ ಬಸ್ಸಿನಿಂದ ರಸ್ತೆಗೆ ಎಸೆತ!

ಬೆಳ್ತಂಗಡಿ,ಮಾರ್ಚ್ಗೇರುಕಟ್ಟೆಯಿಂದ ಬೆಳ್ತಂಗಡಿ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಈ ವಿದ್ಯಾರ್ಥಿನಿಯರು ಪ್ರಯಾಣಿಸುತ್ತಿದ್ದರು. ಇವರಲ್ಲಿ ಒಬ್ಬಾಕೆ ಬೆಳ್ತಂಗಡಿಯ ಖಾಸಗಿ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿಯಾಗಿದ್ದರೆ, ಮತ್ತೋರ್ವಳು ಎಸ್ಎಸ್ಎಲ್ಸಿ ವಿದ್ಯಾರ್ಥಿನಿ. ಇಂದು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲು ಬಸ್ಸಿನಲ್ಲಿ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ.ಬಸ್ಸಿನಲ್ಲಿ ಪ್ರಯಾಣಿಕರ ಸಂಖ್ಯೆ ಅಧಿಕವಾಗಿದ್ದು, ಓವರ್ ಲೋಡ್ ಆಗಿತ್ತು ಎನ್ನಲಾಗಿದೆ. ಬಸ್ ಚಲಿಸುತ್ತಿದ್ದಾಗಲೇ ಬಾಗಿಲು ದಿಢೀರನೆ ತೆರೆದುಕೊಂಡಿದ್ದರಿಂದ ವಿದ್ಯಾರ್ಥಿನಿಯರು ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣವೇ ಗಾಯಾಳುಗಳನ್ನು ಬೆಳ್ತಂಗಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. 31 : ತಾಲೂಕಿನ ಗೇರುಕಟ್ಟೆಯ ರೇಷ್ಮೆ ರೋಡ್ ಬಳಿ ಮಂಗಳವಾರ ಬೆಳಿಗ್ಗೆ ಚಲಿಸುತ್ತಿದ್ದ ಬಸ್ಸಿನ ಬಾಗಿಲು ಆಕಸ್ಮಿಕವಾಗಿ ತೆರೆದ ಪರಿಣಾಮ, ಒಂದೇ ಮನೆಯ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ.
