ಉಚ್ಚಿಲ: ಕಾರು ಢಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ಮಹಿಳೆ ದುರ್ಮರಣ

ಪಡುಬಿದ್ರಿ: ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನದ ಎದುರು ಕಾರೊಂದು ರಸ್ತೆ ದಾಟಲಯ ನಿಂತಿದ್ದ ಮಹಿಳೆಯರಿಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ತೀವ್ರ ಗಾಯಗೊಂಡಿದ್ದ ಓರ್ವ ಮಹಿಳೆ ಸಾವನ್ನಿಪ್ಪಿದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಸಾಸ್ತಾನದ ನಿವಾಸಿ ಮಮತಾ (40) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹೆದ್ದಾರಿಯ ಪೂರ್ವ ಬದಿಯಿಂದ ಪಶ್ಚಿಮ ಬದಿಗೆ ದಾಟಲು ಡಿವೈಡರ್ ಬಳಿ ನಿಂತಿದ್ದ ಈರ್ವರು ಮಹಿಳೆಯರಿಗೆ ಶುಕ್ರವಾರ ರಾತ್ರಿಯ ವೇಳೆ ಕಾರು ಢಿಕ್ಕಿ ಹೊಡೆದಿದೆ. ಜತೆಯಲ್ಲಿದ್ದ ಮಹಿಳೆಗೂ ಗಾಯಗಳಾಗಿದ್ದು ಉಡುಪಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
