Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉಜ್ಜಯಿನಿ: ಆಟವಾಡುತ್ತಿದ್ದಾಗ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಬಾಲಕ; ಸ್ಥಳದಲ್ಲಿ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ

Spread the love

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯಲ್ಲಿ ಮೈದಾನದಲ್ಲಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕ ತೆರೆದ ಕೊಳವೆ ಬಾವಿಯೊಳಗೆ ಬಿದ್ದಿದ್ದು ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಬ್ಲಾಗರ್ ತಪ್ಪಿಲ್‌ ಝಲಾರಿಯಾ ಗ್ರಾಮದಲ್ಲಿ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಸಂತ್ರಸ್ತ ಬಾಲಕನನ್ನು ಭಗೀರಥ್ ಎಂದು ಗುರುತಿಸಲಾಗಿದೆ. ಈತ ಪ್ರವೀಣ್ ದೇವಸಿ ಎಂಬ ಕುರಿಗಾಹಿಯ ಪುತ್ರನಾಗಿದ್ದಾನೆ.
ಪ್ರವೀಣ್ ದೇವಸಿ ತಮ್ಮ ಕುಟುಂಬದೊಂದಿಗೆ ರಾಜಸ್ಥಾನದ ಪಾಳಿಯಿಂದ 3 ದಿನಗಳ ಹಿಂದೆ ಈ ಪ್ರದೇಶಕ್ಕೆ ಬಂದಿದ್ದರು ಎನ್ನಲಾಗಿದೆ.
ಘಟನೆ ಕುರಿತು ಸುದ್ದಿ ತಿಳಿಯುತ್ತಿದ್ದಂತೆ ಬದ್ಘಾಗರ್ ಠಾಣಾಧಿಕಾರಿ ಅಶೋಕ್ ಪಾಟೀದಾರ್ ತಮ್ಮ ತಂಡದೊಂದಿಗೆ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ್ದರು. ಬಾವಿಯೊಳಗೆ ಆಮ್ಲಜನಕವನ್ನು ಪೂರೈಸಲಾಗುತ್ತಿದೆ. ರಾಜ್ಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ.


Spread the love
Share:

administrator

Leave a Reply

Your email address will not be published. Required fields are marked *