ಉಳ್ಳಾಲ: ಉದ್ಯೋಗಕ್ಕಾಗಿ ಬೆಂಗಳೂರಿಗೆ ತೆರಳಿದ್ದ 19 ವರ್ಷದ ಯುವಕ ಅಜಯ್ ಡಿಸೋಜಾ ನಾಪತ್ತೆ – ಪೊಲೀಸ್ ಠಾಣೆಯಲ್ಲಿ ದೂರು ದಾಖಲು!

ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಜಯ್ ಆಗಸ್ಟ್ 9 ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಆಗಸ್ಟ್ 10 ರಂದು ಅವರು ಕರೆ ಮಾಡಿ ಬೆಂಗಳೂರಿನ ಹೋಟೆಲ್ ಒಂದಕ್ಕೆ ಸೇರಿರುವುದಾಗಿ ತಮ್ಮ ಕುಟುಂಬಕ್ಕೆ ತಿಳಿಸಿದರು. ಆದರೆ, ಅವರು ತಮ್ಮ ಸ್ಥಳದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ.ಆಗಸ್ಟ್ 11 ರಂದು ಅವರ ಕುಟುಂಬದವರು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಅಜಯ್ ತಾಯಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.