Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುಪಿಐ ಜಿಎಸ್‌ಟಿ ನೋಟಿಸ್ ಗೊಂದಲ ಅಂತ್ಯ: ಸಣ್ಣ ವ್ಯಾಪಾರಿಗಳ ಪ್ರತಿಭಟನೆ ರದ್ದು, ಸಿಎಂ ಸಿದ್ದರಾಮಯ್ಯ ಭರವಸೆ!

Spread the love

ಬೆಂಗಳೂರಿ ಸೇರಿ ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಎದುರಾಗಿದ್ದ ಫೋನ್ ಪೇ ಹಾಗೂ ಗೂಗಲ್ ಪೇ ಸೇರಿದಂತೆ ಯುಪಿಐ ಪೇಮೆಂಟ್ ಬಳಕೆದಾರರ ಗೊಂದಲ ಕೊನೆಗೂ ಇತ್ಯಾರ್ಥವಾಗುವ ಹಂತಕ್ಕೆ ಬಂದಿದೆ. ಸಣ್ಣ ವ್ಯಾಣಿಜ್ಯೋದ್ಯಮಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆ ನೀಡಿರುವ ಜಿಎಸ್‌ಟಿ ನೊಟೀಸ್ ವಿಷಯಕ್ಕೆ ಸಂಬಂಧಿಸಿದಂತೆ ವ್ಯಾಪಾರಿಗಳೊಂದಿಗೆ ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಭೆ ನಡೆಸಿದ್ದು.

ಬಂದ್ ಮಾಡುವ ನಿರ್ಧಾರವನ್ನು ವ್ಯಾಪಾರಿಗಳು ಕೈಬಿಟ್ಟಿದ್ದಾರೆ. ಈ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದೇನು ಎನ್ನುವ ಸಂಪೂರ್ಣ ವಿವರ ಇಲ್ಲಿದೆ.

ವ್ಯಾಪಾರಿಗಳನ್ನು ಪ್ರತಿನಿಧಿಸುವ ಹಲವು ಸಂಘಟನೆಗಳ ಪ್ರತಿನಿಧಿಗಳು ತಮ್ಮ ಅಹವಾಲುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ. ಸಣ್ಣ ವ್ಯಾಪಾರಿಗಳಲ್ಲಿ ಜಿಎಸ್‌ಟಿ ನೊಟೀಸ್ ಕುರಿತು ಗೊಂದಲ ಇತ್ತು. ಸಾಲದ ಮೊತ್ತ ಕೂಡಾ ಇದರಲ್ಲಿ ಸೇರಿಕೊಂಡಿದೆ. ವೈಯಕ್ತಿಕ ವಹಿವಾಟು ಹಣ ಸಹ ಇದರಲ್ಲಿ ಸೇರಿದೆ ಎಂದು ವ್ಯಾಪಾರಿಗಳು ಹೇಳಿದ್ದಾರೆ.

  • ಹಾಲು, ತರಕಾರಿ, ಮಾಂಸ, ಹಣ್ಣಿನಂತಹ ಅಗತ್ಯ ಆಹಾರ ವಸ್ತುಗಳಿಗೆ ತೆರಿಗೆ ವಿನಾಯಿತಿ ಇದೆ. ಅಂತಹ ವ್ಯಾಪಾರಿಗಳಿಗೆ ನೊಟೀಸ್ ಕೊಟ್ಟಿದ್ದರೂ, ಅವರಿಂದ ತೆರಿಗೆ ವಸೂಲು ಮಾಡುವುದಿಲ್ಲ. ಆದರೆ, ಯಾರು ಕಾಯ್ದೆ ಪ್ರಕಾರ ತೆರಿಗೆ ಕಟ್ಟಬೇಕಾಗಿದೆಯೋ ಅವರು ಕಟ್ಟಬೇಕು. ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೀಡಿದ್ದರೆ, ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು ಎಂದು ಸಿ.ಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
  • ಜಿಎಸ್‌ಟಿ ನೊಟೀಸ್‌ಗಳನ್ನು ನಿಯಮಾನುಸಾರವಾಗಿಯೇ ನೀಡಲಾಗಿದೆ. ಆದರೆ ವ್ಯಾಪಾರಿಗಳಿಗೆ ಪರಿಹಾರ ತೆರಿಗೆ ಪಾವತಿಸಲು ಅವಕಾಶ ನೀಡಬೇಕು. ಮಧ್ಯವರ್ತಿಗಳಿಗೆ ಅವಕಾಶ ನೀಡದೆ, ವ್ಯಾಪಾರಿಗಳು ನೇರವಾಗಿ ಇಲಾಖೆ ಸಂಪರ್ಕಿಸಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೆಲವು ಪ್ರತಿನಿಧಿಗಳು ಮನವಿ ಮಾಡಿದ್ದಾರೆ.
  • ಸಣ್ಣ ವ್ಯಾಪಾರಿಗಳಿಗೆ ನೆರವಾಗುವಂತೆ ಸಹಾಯವಾಣಿ ಆರಂಭಿಸಬೇಕು. ಜಿಎಸ್‌ಟಿ ಕುರಿತು ಸರಿಯಾಗಿ ಮಾಹಿತಿ ಇಲ್ಲದ ಕಾರಣ ಗೊಂದಲ ಉಂಟಾಗಿದೆ. ಜಾಗೃತಿ ಕಾರ್ಯಕ್ರಮ ಕೈಗೊಳ್ಳಬೇಕು. ಒಂದು ಬಾರಿಗೆ ಹಳೆಯ ಬಾಕಿಯನ್ನು ಮನ್ನಾ ಮಾಡಬೇಕು ಎಂದು ಮನವಿ ಸಲ್ಲಿಸಿದ್ದಾರೆ.
  • ಯುಪಿಐ ಅಡಿ ರೂ. 40 ಲಕ್ಷಕ್ಕೂ ಅಧಿಕ ವಹಿವಾಟು ಮಾಡಿರುವವರಿಗೆ ಮಾತ್ರ ಜಿಎಸ್‌ಟಿ ನೊಟೀಸ್ ನೀಡಲಾಗಿದೆ. ಆರಂಭದಲ್ಲಿ ಜಿಎಸ್‌ಟಿ ನೊಂದಣಿ ಮಾಡುವಂತೆ ನೋಟಿಸ್ ನೀಡಲಾಗಿತ್ತು.
  • ರಾಜ್ಯದಲ್ಲಿ ಕೇವಲ 9 ಸಾವಿರ ವ್ಯಾಪಾರಿಗಳಿಗೆ ಕಳೆದ 2-3 ವರ್ಷಗಳ ಅವಧಿಗೆ ಸಂಬಂಧಿಸಿದಂತೆ 18 ಸಾವಿರ ನೊಟೀಸ್ ಜಾರಿಗೊಳಿಸಲಾಗಿದೆ.
  • ವ್ಯಾಪಾರ ವಹಿವಾಟುಗಳನ್ನು ನಡೆಸಲು ಕಾನೂನುಬದ್ಧವಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ. ತೆರಿಗೆ ಸರಿಯಾಗಿ ಪಾವತಿಸಲು ಸಹಕಾರ ನೀಡಲಿದೆ. ವ್ಯಾಪಾರಿಗಳಿಗೆ ತೊಂದರೆ ನೀಡಬೇಕೆಂಬುವುದು ಸರ್ಕಾರದ ಉದ್ದೇಶವಲ್ಲ. ಸರ್ಕಾರ ಸಣ್ಣ ವ್ಯಾಪಾರಿಗಳ ಪರವಾಗಿದೆ.
  • ಸರ್ಕಾರ ಪಾರದರ್ಶಕವಾಗಿ ಕಾರ್ಯನಿರ್ವಹಿಸಲಿದ್ದು, ಯಾರಿಗೂ ತೊಂದರೆಯಾಗದಂತೆ ಖಾತ್ರಿಪಡಿಸಲಾಗುವುದು. ವ್ಯಾಪಾರಿಗಳಿಗೆ ನೆರವು ನೀಡಲು ಈಗಲೇ ಸಹಾಯವಾಣಿ ಇದ್ದು, ಇದನ್ನು ಇನ್ನಷ್ಟು ಪರಿಣಾಮಕಾರಿ ಮಾಡಲಾಗುವುದು.

ವ್ಯಾಪಾರ ವಹಿವಾಟು ಬಂದ್ ಇಲ್ಲ: ಇನ್ನು ಫೋನ್ ಪೇ ಹಾಗೂ ಗೂಗಲ್ ಪೇ ಸೇರಿದಂತೆ ಡಿಜಿಟಲ್ ಪೇಮೆಂಟ್‌ನಲ್ಲಿ ಉಂಟಾಗಿರುವ ಗೊಂದಲ ಹಾಗೂ ಜಿಎಸ್‌ಟಿ ಪಾವತಿ ಮಾಡಬೇಕು ಎನ್ನುವುದನ್ನು ವಿರೋಧಿಸಿ ಕರ್ನಾಟಕ ಮತ್ತು ಬೆಂಗಳೂರು ಬಂದ್‌ಗೆ ಕೆಲವು ವ್ಯಾಪಾರಿಗಳು ಕರೆ ನೀಡಿದ್ದರು. ಆದರೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯ ಸಭೆ ನಡೆದಿರುವುದರಿಂದ ನಿರ್ಧಾರವನ್ನು ಕೈಬಿಡಲಾಗಿದೆ. ವ್ಯಾಪಾರ ವಹಿವಾಟು ಬಂದ್‌ಗೆ ಯಾವುದೇ ಸಂಘಟನೆಗಳು ಬೆಂಬಲ ನೀಡಿಲ್ಲ ಎಂದು ಪ್ರತಿನಿಧಿಗಳು ಸ್ಪಷ್ಟಪಡಿಸಿದ್ದಾರೆ. ಈ ಕುರಿತಾಗಿ ನಡೆಸಲು ನಿರ್ಧರಿಸಿದ್ದ ಎಲ್ಲಾ ರೀತಿಯ ಪ್ರತಿಭಟನೆಗಳನ್ನು ಕೈಬಿಡಲಾಗುವುದು ಎಂದು ಸಂಘ ಸಂಸ್ಥೆಗಳ ಪ್ರತಿನಿಧಿಗಳು ತಿಳಿಸಿದ್ದಾರೆ ಎಂದು ಸಿ.ಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಎಸ್‌ಟಿ ಯನ್ನು ಕೇಂದ್ರ ಹಣಕಾಸು ಸಚಿವರ ಅಧ್ಯಕ್ಷತೆಯ ಜಿಎಸ್‌ಟಿ ಕೌನ್ಸಿಲ್ ನಿರ್ಧರಿಸುತ್ತದೆ. ಇದಕ್ಕೆ ಸಂಬಂಧಿಸಿದ ಎಲ್ಲ ನೀತಿ-ನಿಯಮಾವಳಿಗಳನ್ನು ಕೇಂದ್ರ ಸರ್ಕಾರವೇ ರಚಿಸಿದೆ. ಅವುಗಳ ಪಾಲನೆ ಮಾಡುವುದಷ್ಟೇ ರಾಜ್ಯ ಸರ್ಕಾರಗಳ ಕರ್ತವ್ಯವಾಗಿದೆ. ಈ ನೀತಿ-ನಿಯಮಾವಳಿಗಳ ರಚನೆಯಲ್ಲಿ ರಾಜ್ಯಗಳ ಪಾತ್ರ ಇಲ್ಲ.

ರಾಜ್ಯ ಸರ್ಕಾರ ಸಂಗ್ರಹಿಸುವ ಜಿಎಸ್ ಟಿಯಲ್ಲಿ ಶೇಕಡಾ 50ರಷ್ಟು ಮೊತ್ತ ಮಾತ್ರ ರಾಜ್ಯಕ್ಕೆ ನೀಡಲಾಗುತ್ತದೆ. ಕರ್ನಾಟಕ ಸರ್ಕಾರ ತೆರಿಗೆ ಸಂಗ್ರಹವನ್ನು ಉತ್ತಮ ರೀತಿಯಲ್ಲಿ ಮಾಡುತ್ತಿದೆ. ಜಿಎಸ್ ಟಿ ಸಂಗ್ರಹದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *