ದಕ್ಷಿಣ ಇರಾನ್ ಮೇಲೆ ಅಮೆರಿಕ ದಾಳಿ: 30ಕ್ಕೂ ಹೆಚ್ಚು ನಾಗರಿಕರ ಸಾ*ವು – ಇರಾನ್ ಸರ್ಕಾರಿ ವಕ್ತಾರರ ಆರೋಪ!

ಟೆಹ್ರಾನ್: ದಕ್ಷಿಣ ಇರಾನ್ ನಲ್ಲಿ ಕಳೆದ ಕೆಲವು ದಿನಗಳಿಂದ ಅಮೆರಿಕ ನಡೆಸಿದ ದಾಳಿಗಳಲ್ಲಿ 30ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ ಎಂದು ಇರಾನ್ ಸರ್ಕಾರದ ವಕ್ತಾರೆ ಫಾತಿಮೆಹ್ ಮೊಹಜೆರಾನಿ ತಿಳಿಸಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಅವರು, “ದಾಳಿಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ನಮ್ಮ ಸಂತಾಪ ಹಾಗೂ ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇವೆ. ಮೃತರಿಗೆ ನಾವು ಗೌರವ ಸಲ್ಲಿಸುತ್ತೇವೆ” ಎಂದು ಹೇಳಿದ್ದಾರೆ.
“ಸರ್ಕಾರವು ತನ್ನ ಸಂಪೂರ್ಣ ಶಕ್ತಿಯೊಂದಿಗೆ ಜನರ ಬೆಂಬಲಕ್ಕೆ ನಿಲ್ಲಲಿದೆ. ಇರಾನ್‌ನ ದಕ್ಷಿಣ ಭಾಗವು ಈ ದೇಶದ ಮಿಡಿಯುವ ಹೃದಯವಾಗಿದೆ” ಎಂದೂ ಅವರು ಹೇಳಿದ್ದಾರೆ.
ಕಳೆದ ಕೆಲವು ದಿನಗಳಿಂದ ದಕ್ಷಿಣ ಇರಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ಮೊಹಜೆರಾನಿ ಆರೋಪಿಸಿದ್ದಾರೆ.
