Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉತ್ತರ ಪ್ರದೇಶ: ಕಾನ್ಪುರದಲ್ಲಿ ಲಘು ತರಬೇತಿ ವಿಮಾನ ಪತನ; ಪೈಲಟ್ ಹಾಗೂ ವಿದ್ಯಾರ್ಥಿ ದಾರುಣ ಸಾ*ವು!

Spread the love

ಕಾನ್ಪುರ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಗುರುವಾರ ಬೆಳಗ್ಗೆ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಗಂಗಾ ಬ್ಯಾರೇಜ್ ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ನಾಲ್ಕು ಆಸನಗಳ ಲಘು ತರಬೇತಿ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಪೈಲಟ್ ಹಾಗೂ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾರೆ.

ಪೊಲೀಸ್ ಆಯುಕ್ತ ರಘುಬೀರ್ ಲಾಲ್ ಅವರ ಮಾಹಿತಿ ಪ್ರಕಾರ, ಬೆಳಗ್ಗೆ ಸುಮಾರು 11.50ರ ವೇಳೆಗೆ ಈ ದುರ್ಘಟನೆ ಸಂಭವಿಸಿದೆ. ಮೃತರನ್ನು ಕರ್ನಾಟಕ ಮತ್ತು ಗುಜರಾತ್ ಮೂಲದವರು ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ. ವಿಮಾನವನ್ನು ಚಲಾಯಿಸುತ್ತಿದ್ದ ಮುಖ್ಯ ಬೋಧಕ ಪೈಲಟ್‌ಗೆ 3 ಸಾವಿರಕ್ಕೂ ಅಧಿಕ ಗಂಟೆಗಳ ವಿಮಾನ ಹಾರಾಟದ ಅನುಭವವಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತದ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರತೆಗೆದಿವೆ.ವಿಮಾನ ಪತನಕ್ಕೆ ಎಂಜಿನ್ ವೈಫಲ್ಯ, ಹವಾಮಾನ ವೈಪರೀತ್ಯ ಅಥವಾ ಇತರ ತಾಂತ್ರಿಕ ಕಾರಣವೇ ಕಾರಣ ಎಂಬುದರ ಕುರಿತು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನಿಖೆ ಆರಂಭಿಸಿದೆ. ತನಿಖೆಯ ಬಳಿಕ ಅಪಘಾತದ ನಿಖರ ಕಾರಣ ತಿಳಿದುಬರಲಿದೆ.


Spread the love
Share:

administrator

Leave a Reply

Your email address will not be published. Required fields are marked *