ಉತ್ತರ ಪ್ರದೇಶ ವಿಮಾನ ಅಪಘಾತ: ಉಡುಪಿಯ ಕಣಜಾರು ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ ದಾರುಣ ಸಾ*ವು!

ಉಡುಪಿ: ಉತ್ತರ ಪ್ರದೇಶದ ಕಾನ್ಪುರದಲ್ಲಿ ಆಗಸ್ಟ್ 27ರಂದು ಖಾಸಗಿ ತರಬೇತಿ ವಿಮಾನ ಅಪಘಾತದಲ್ಲಿ ಉಡುಪಿ ಮೂಲದ ತರಬೇತಿ ಪೈಲಟ್ ಅಭಿಷೇಕ್ ಪೂಜಾರಿ(22) ಮೃತಪಟ್ಟಿದ್ದಾರೆ.

ಅಭಿಷೇಕ್ ಪೂಜಾರಿ ಅವರು ಉಡುಪಿ ಜಿಲ್ಲೆಯ ಕಣಜಾರು ಗ್ರಾಮದ ಕಾಡೆಬರ್ಕೆ ನಿವಾಸಿ ಮೂಲದವರಾಗಿದ್ದು, ಈ ಪ್ರದೇಶವು ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುತ್ತದೆ. ಲಭ್ಯ ಮಾಹಿತಿಯ ಪ್ರಕಾರ, ಅವರು ಕಳೆದ ಸುಮಾರು ಎರಡೂವರೆ ವರ್ಷಗಳಿಂದ ಉತ್ತರ ಪ್ರದೇಶದ ಕಾನ್ಪುರದಲ್ಲಿ ಖಾಸಗಿ ತರಬೇತಿ ಪೈಲಟ್ ಆಗಿ ತರಬೇತಿ ಪಡೆಯುತ್ತಿದ್ದರು.ಅಭಿಷೇಕ್ ಅವರ ತಂದೆ ಪ್ರಭಾಕರ್ ಪೂಜಾರಿ ಹಾಗೂ ತಾಯಿ ಶಶಿಕಲಾ ಪೂಜಾರಿ ಅವರು ಮಹಾರಾಷ್ಟ್ರದ ಮುಂಬೈನಲ್ಲಿ ವಾಸವಾಗಿದ್ದಾರೆ. ಅಭಿಷೇಕ್ ಅವರು ತಮ್ಮ ಕುಟುಂಬದೊಂದಿಗೆ ಆಗಾಗ ಕಣಜಾರು ಗ್ರಾಮದ ಕಾಡೆಬರ್ಕೆಯಲ್ಲಿರುವ ತಮ್ಮ ತಾಯಿಯ ಸಹೋದರ ಜೀವನ್ ಕುಮಾರ್ ಅವರ ಮನೆಗೆ ಭೇಟಿ ನೀಡುತ್ತಿದ್ದರು.ಅಪಘಾತದ ಮಾಹಿತಿ ತಿಳಿದ ಕುಟುಂಬಸ್ಥರು ಕಾನ್ಪುರಕ್ಕೆ ತೆರಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕಾನೂನು ಪ್ರಕ್ರಿಯೆಗಳು ಮುಂದುವರಿದಿವೆ.