Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಉತ್ತರ ಪ್ರದೇಶ: ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೋ ಪೋಸ್ಟ್, ಯುವಕ ಅರೆಸ್ಟ್

Spread the love

How to Share Instagram Post to Story in 2025 | Social Champ

ಲಖನೌ: ಸಾಮಾಜಿಕ ಮಾಧ್ಯಮದಲ್ಲಿ ಭಗವಾನ್‌ ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೊ ಪೋಸ್ಟ್‌ ಮಾಡಿದ ಆರೋಪದಡಿ ಯುವಕನೊಬ್ಬನನ್ನು ಉತ್ತರಪ್ರದೇಶದ ಸೋನಭದ್ರ ಜಿಲ್ಲೆಯಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯನ್ನು 22 ವರ್ಷದ ಸೂರಜ್ ಜಾತವ್ ಎಂದು ಗುರುತಿಸಲಾಗಿದೆ.

ಸೂರಜ್‌ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಶ್ರೀರಾಮನ ಕುರಿತು ಆಕ್ಷೇಪಾರ್ಹ ವಿಡಿಯೊ ಪೋಸ್ಟ್‌ ಮಾಡಿರುವ ಸಂಬಂಧ ಭಾನುವಾರ ದೂರು ಸ್ವೀಕರಿಸಲಾಯಿತು. ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹದ್ದು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

‘ಇಂತಹ ಬೆಳವಣಿಗೆಗಳು ಸಮಾಜದಲ್ಲಿ ಶಾಂತಿ ನೆಲೆಗೆ ಅಪಾಯವನ್ನುಂಟು ಮಾಡುತ್ತದೆ ಮತ್ತು ಕೋಮು ಸಾಮರಸ್ಯವನ್ನು ಕದಡಬಹುದು’ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *