ಬಿಹಾರದಲ್ಲಿ ವಂದೇ ಭಾರತ್ ದುರಂತ: ರೈಲು ಡಿಕ್ಕಿ- ನಾಲ್ವರು ಸಾವು, ಹಲವರಿಗೆ ಗಾಯ!

ಪಾಟ್ನಾ: ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಬಿಹಾರದ ಪೂರ್ಣಿಯಾದಲ್ಲಿ ನಡೆದಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಗಾಯಾಳುಗಳನ್ನು ಚಿಕಿತ್ಸೆಗಾಗಿ ಜಿಎಂಸಿಗೆ ಕಳುಹಿಸಲಾಗಿದೆ. ರೈಲ್ವೆ ಪೊಲೀಸರು ಶವಗಳನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.ಜೋಗಬಾನಿಯಿಂದ ಪಾಟಲಿಪುತ್ರಕ್ಕೆ ಚಲಿಸುವ ವಂದೇ ಭಾರತ್ ರೈಲು ಬೆಳಗ್ಗೆ 5 ಗಂಟೆ ಸುಮಾರಿಗೆ ಪಟ್ಟಣದ ಬಳಿ ಹಾದುಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣ ರೈಲ್ವೆ ಕ್ರಾಸಿಂಗ್ ಸಿಬ್ಬಂದಿಯ ನಿರ್ಲಕ್ಷ್ಯವೋ ಅಥವಾ ಜನರು ಹೈಸ್ಪೀಡ್ ರೈಲನ್ನು ನಿರ್ಲಕ್ಷಿಸಿ ಕ್ರಾಸಿಂಗ್ ದಾಟಲು ಪ್ರಯತ್ನಿಸಿದ್ದರೋ ಎಂಬುದರ ಕುರಿತು ಇನ್ನೂ ಯಾವುದೇ ಮಾಹಿತಿ ಇಲ್ಲ.
