Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಲಯಾಳಂ ಹಿರಿಯ ನಟ ಸಂತೋಷ್ ಕೆ. ನಾಯರ್ ರಸ್ತೆ ಅಪಘಾತದಲ್ಲಿ ನಿಧನ

Spread the love

ತಿರುವನಂತಪುರಂ: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮಂಗಳವಾರ ಮುಂಜಾನೆ ಅವರು ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ವ್ಯಾನ್ ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪತ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
1982ರಲ್ಲಿ ಬಿಡುಗಡೆಯಾದ ‘ಇದು ಇಂಜಳುಡೆ ಕಥಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂತೋಷ್ ಕೆ ನಾಯರ್ ಅವರು ಬಳಿಕ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಖಳನಾಯಕ ಹಾಗೂ ಹಾಸ್ಯಪಾತ್ರಗಳ ಮೂಲಕ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಸಂತೋಷ್ ಕೇಶವನ್ ನಾಯರ್ ಅವರ ತಂದೆ ಸಿ.ಎನ್. ಕೇಶವನ್ ನಾಯರ್ ನಿವೃತ್ತ ಮುಖ್ಯೋಪಾಧ್ಯಾಯರು, ತಾಯಿ ಪಿ. ರಾಜಲಕ್ಷ್ಮಿಯಮ್ಮ ನಿವೃತ್ತ ಶಿಕ್ಷಕಿ.
ಕಾಲೇಜು ದಿನಗಳಲ್ಲಿ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದ ಅವರು, ತಮ್ಮ ಸಹೋದರಿಯರು ಸ್ತ್ರೀರೋಗ ತಜ್ಞರಾಗಿದ್ದರೂ, ನಟನೆಯನ್ನು ವೃತ್ತಿಯಾಗಿ ಆರಿಸಿಕೊಂಡಿದ್ದರು.
ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ ಅವರೊಂದಿಗೆ ಸಂತೋಷ್ ಕೆ ನಾಯರ್ ಅವರಿಗೆ ಆಪ್ತ ಸ್ನೇಹಬಂಧವಿತ್ತು. ಇಬ್ಬರೂ ಎಂಜಿ ಕಾಲೇಜಿನಲ್ಲಿ ಒಂದೇ ಸಮಯದಲ್ಲಿ ವ್ಯಾಸಂಗ ಮಾಡಿದ್ದರು. ಸಂತೋಷ್ ಗಣಿತದಲ್ಲಿ ಬಿಎಸ್ಸಿ ಪದವಿ ಪಡೆದರೆ, ಮೋಹನ್‌ಲಾಲ್ ವಾಣಿಜ್ಯ ವಿಭಾಗದಲ್ಲಿ ಪದವಿ ಪಡೆದಿದ್ದರು.


Spread the love
Share:

administrator

Leave a Reply

Your email address will not be published. Required fields are marked *