Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಅಪಘಾತದಲ್ಲಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಮೋಹನ್ ಚಂದರ್ ನಿಧನ

Spread the love

ಮಂಗಳೂರು: ನಂತೂರು ತಾರಾಯಿತೋಟ ಎಂಬಲ್ಲಿ ಕಳೆದ ಶನಿವಾರ ನಡೆದಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಛಾಯಾಗ್ರಾಹಕ ಕೆ. ಮೋಹನ್ ಚಂದರ್ (64) ಅವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಿಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಶನಿವಾರ ರಾತ್ರಿ ಸುಮಾರು 8:30ರ ಸುಮಾರಿಗೆ ಧರ್ಮಸ್ಥಳ ಮೂಲದ ಬೈಕ್ ಸವಾರ ಗೋಪಾಲಕೃಷ್ಣ (27) ಎಂಬಾತ ಅತಿವೇಗವಾಗಿ ಬೈಕ್ ಚಲಾಯಿಸಿ, ಓವರ್‌ಟೇಕ್ ಮಾಡುವ ಭರದಲ್ಲಿ ಮೋಹನ್ ಚಂದರ್ ಅವರ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದ. ಡಿಕ್ಕಿಯ ರಭಸಕ್ಕೆ ಗೋಪಾಲಕೃಷ್ಣ ಟಿಪ್ಪರ್‌ಗೆ ಬಡಿದು ಸ್ಥಳದಲ್ಲೇ ಮೃತಪಟ್ಟಿದ್ದರೆ, ರಸ್ತೆಗೆ ಎಸೆಯಲ್ಪಟ್ಟ ಮೋಹನ್ ಚಂದರ್ ಅವರ ತಲೆಗೆ ಗಂಭೀರ ಗಾಯವಾಗಿತ್ತು.

ಅಪಘಾತದ ದೃಶ್ಯವು ಟೆಂಪೋ ಒಂದರ ಡ್ಯಾಶ್ ಕ್ಯಾಮ್‌ನಲ್ಲಿ ಸೆರೆಯಾಗಿದ್ದು, ಟೆಂಪೋ ಚಾಲಕ ಗಂಗಾಧರ್ ಅವರು ತಕ್ಷಣ ಮೋಹನ್ ಅವರನ್ನು ಕಂಕನಾಡಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಕಳೆದ ಎರಡು ದಿನಗಳಿಂದ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಮೋಹನ್ ಚಂದರ್ ಅವರು ಇಂದು ಕೊನೆಯುಸಿರೆಳೆದಿದ್ದಾರೆ. ಮೃತರು ಪದವಿನಂಗಡಿಯಲ್ಲಿ ಸ್ಟುಡಿಯೋ ಹೊಂದಿದ್ದರು.


Spread the love
Share:

administrator

Leave a Reply

Your email address will not be published. Required fields are marked *