Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯನಗರ: ಕೂಡ್ಲಿಗಿ ತಾಲೂಕಿನಲ್ಲಿ ರೈತನ ಮೇಲೆ ಕರಡಿ ದಾಳಿ – ತಲೆಗೆ ಗಂಭೀರ ಗಾಯ!

Spread the love

ಕೂಡ್ಲಿಗಿ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೋರ್ವನ ಮೇಲೆ ಕರಡಿ ದಾಳಿ ತೀವ್ರವಾಗಿ ಗಾಯಗೊಳಿಸಿದ ಘಟನೆ ಅಮಲಾಪುರ ಗ್ರಾಮದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ.
ಅಮಲಾಪುರ ಗ್ರಾಮದ ಬಸವರಾಜ (40) ಗಾಯಗೊಂಡವರು. ತಲೆಗೆ ತೀವ್ರ ಗಾಯಗಳಾಗಿರುವ ಅವರನ್ನು ಸ್ಥಳೀಯರು ರಕ್ಷಿಸಿ ಕೂಡ್ಲಿಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
ಬಸವರಾಜ ಶನಿವಾರ ಬೆಳಗ್ಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಕರಡಿ ದಾಳಿ ಮಾಡಿದೆ. ಇದರಿಂದ ಅವರ ತಲೆಗೆ ತೀವ್ರ ಗಾಯಗಳಾಗಿವೆ.
ಘಟನೆಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಅರಣ್ಯ ಇಲಾಖೆ ಸ್ಥಳ ಪರಿಶೀಲನೆ ನಡೆಸುತ್ತಿದೆ. ಕರಡಿಯನ್ನು ಪತ್ತೆಹಚ್ಚಿ ಸುರಕ್ಷತಾ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *