ವಿಜಯಪುರ ಗಣಪತಿ ವಿಸರ್ಜನೆ ದುರಂತ: ಕರೆಂಟ್ ಶಾಕ್‌ಗೆ ಯುವಕ ಸಾವು

ವಿಜಯಪುರ: ಗಣಪತಿ ವಿಸರ್ಜನೆ ವೇಳೆ ಕರೆಂಟ್ ವೈಯರ್ ಅನ್ನು ಮೇಲೆ ಮಾಡಲು ಹೋಗಿ ಯುವಕನೊಬ್ಬ ಕರೆಂಟ್ ಶಾಕ್ ಗೆ ಸಾವನಪ್ಪಿದ ಘಟನೆ ವಿಜಯಪುರ ನಗರದ ಗಾಂಧಿಚೌಕ್ ವೃತ್ತದ ಟಾಂಗಾ ಸ್ಟ್ಯಾಂಡ್ ಬಳಿ ನಡೆದಿದೆ. ಘಟನೆಯಲ್ಲಿ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದೆ.

ನಗರದ ಡೋಬಲೆ ಗಲ್ಲಿ ನಿವಾಸಿ ಶುಭಂ ಸಂಕಳ (21) ಮೃತ ದುರ್ದೈವಿ. ಸೋಲಾಪುರದ ಡಿಜೆ ಯುವಕ ಪ್ರಭಾಕರ್ ಜಂಗಲೆ (22), ಡೋಬಲೆ ಗಲ್ಲಿಯ ಲಖನ್ ಶ್ರೀಕಾಂತ್ ಚವ್ಹಾಣ್ (28) ಸ್ಥಿತಿ ಗಂಭೀರವಾಗಿದೆ.
7ನೇ ದಿನ ಗಣೇಶನ ವಿಸರ್ಜನೆಗೆ ಮೂರ್ತಿಯನ್ನು ಸಾಗಿಸುವ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಣೇಶ ಮೆರವಣಿಗೆ ವೇಳೆ ಯುವಕರು ಡಿಜೆ ಬಾಕ್ಸ್ ಮೇಲೆ ಕುಳಿತು ಕೋಲಿನಿಂದ ವಿದ್ಯುತ್ ತಂತಿಯನ್ನು ಎತ್ತಿದ್ದರು. ಈ ವೇಳೆ ವಿದ್ಯುತ್ ಪ್ರವಹಿಸಿ ಶುಭಂ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇನ್ನುಳಿದ ಇಬ್ಬರು ಯುವಕರ ಸ್ಥಿತಿ ಚಿಂತಾಜನಕವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
