Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಜಯಪುರ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹ*ತ್ಯೆ

Spread the love

ವಿಜಯಪುರ : ಮೂವರು ಮಕ್ಕಳೊಂದಿಗೆ ತಾಯಿ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಮಿರಗಿ ಗ್ರಾಮದ ನಿವಾಸಿ ರಾಜಶ್ರೀ ಶಂಕ್ರಪ್ಪ ಹಳ್ಳೂರ (28), ಅನುಶ್ರೀ (6), ತನು (3) ಮತ್ತು ಸಂತೋಷ್(1) ಮೃತರು ಎಂದು ಗುರುತಿಸಲಾಗಿದೆ.
ಗುರುವಾರ ಸಂಜೆ ವೇಳೆಗೆ ಈ ಘಟನೆ ನಡೆದಿದ್ದು, ಮೊದಲು ಮಕ್ಕಳನ್ನು ಬಾವಿಗೆ ಎಸೆದ ರಾಜಶ್ರೀ, ನಂತರ ತಾನೂ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ರಾಜಶ್ರೀ ಅವರ ಪತಿ ಶಂಕ್ರಪ್ಪ ಖಾಸಗಿ ಬಸ್ ಚಾಲಕನಾಗಿ ಕೆಲಸ ಮಾಡುತ್ತಿದ್ದು ಕೆಲಸದ ನಿಮಿತ್ತ ಅವರು ಊರಿನಲ್ಲಿ ಇಲ್ಲದ ವೇಳೆ ಈ ಘಟನೆ ನಡೆದಿದೆ.
ಘಟನೆಗೆ ಕಾರಣವೇನು ಎಂಬುದು ಸದ್ಯಕ್ಕೆ ನಿಗೂಢವಾಗಿದೆ. ವಿಷಯ ತಿಳಿದ ಕೂಡಲೇ ಇಂಡಿ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಇಂಡಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.


Spread the love
Share:

administrator

Leave a Reply

Your email address will not be published. Required fields are marked *