Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚಾರ್ಮಾಡಿ ಅರಣ್ಯದಲ್ಲಿ ನಿಷೇಧ ಉಲ್ಲಂಘನೆ: ಟ್ರೆಕ್ಕಿಂಗ್‌ಗೆ ಹೋದ 103 ಪ್ರವಾಸಿಗರು ಪೊಲೀಸರ ವಶಕ್ಕೆ

Spread the love

ಚಿಕ್ಕಮಗಳೂರು: ಚಾರ್ಮಾಡಿ ಫಾಟಿಯ ನಿಷೇಧಿತ ಪ್ರದೇಶದಲ್ಲಿ ಟ್ರೆಕ್ಕಿಂಗ್​ಗೆ ತೆರಳಿದ 103 ಮಂದಿ ಪ್ರವಾಸಿಗರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾರ್ಮಾಡಿ ಘಾಟಿ ಪ್ರದೇಶದ ಬಿದಿರುತಳ (ಮೂಡಿಗೆರೆ ತಾಲೂಕು ವ್ಯಾಪ್ತಿಯಲ್ಲಿದೆ) ಅರಣ್ಯ ಪ್ರದೇಶಕ್ಕೆ ಟ್ರೆಕ್ಕಿಂಗ್ ನಿಷೇಧ ಇದ್ದು, ಬೆಂಗಳೂರು ಮೂಲದ 103 ಜನ ಪ್ರವಾಸಿಗರು ಅಲ್ಲಿಗೆ ತೆರಳಿದ್ದರು. ಸ್ಥಳೀಯರು ಅವರನ್ನು ಅಲ್ಲಿಗೆ ಕರೆದುಕೊಂಡು ಹೋಗಿದ್ದರು. ಅವರನ್ನೆಲ್ಲ ಬಾಳೂರು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎರಡು ಬಸ್, ಮೂರು ಪಿಕಪ್ ವಾಹನಗಳನ್ನೂ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ಕಂಪನಿಯ ಉದ್ಯೋಗಿಗಳು ಟೂರಿಸ್ಟ್ ಪ್ಯಾಕೇಜ್ ಅಡಿಯಲ್ಲಿ ಪ್ರವಾಸಕ್ಕೆ ತೆರಳಿದ್ದರು. ಬಿದಿರುತಳ ಗ್ರಾಮ, ಚಿಕ್ಕಮಗಳೂರು ಜಿಲ್ಲೆಯ ಕೊನೆಯ ಗ್ರಾಮವಾಗಿದೆ.


Spread the love
Share:

administrator

Leave a Reply

Your email address will not be published. Required fields are marked *