Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಸುಹಾಸ್ ಶೆಟ್ಟಿ ಹತ್ಯೆ ವಿರೋಧಿಸಿ ದಕ್ಷಿಣ ಕನ್ನಡ ಬಂದ್‌ಗೆ ವಿಶ್ವ ಹಿಂದೂ ಪರಿಷತ್ ಕರೆ

Spread the love

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಹಿಂದೂ ಕಾರ್ಯಕರ್ತರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದು ಈ ಹಿನ್ನಲೆ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ  ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ಕೊಟ್ಟ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ.

ಮಂಗಳೂರಿನ  ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್​ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್​ನ ಫಾಜಿಲ್ ಕೊಲೆ ಕೇಸ್​ನ​ ಪ್ರಮುಖ ಆರೋಪಿಯಾಗಿದ್ದರು.

ಇನ್ನು ಸುಹಾಸ್​ ಹತ್ಯೆ ವಿಷಯ ತಿಳಿಯುತ್ತಿದ್ದಂತೆಯೇ ಮಂಗಳೂರಿನ ಎ.ಜೆ‌‌.ಆಸ್ಪತ್ರೆಗೆ ಮಂಗಳೂರು ದಕ್ಷಿಣ ಬಿಜೆಪಿ ಶಾಸಕ ವೇದವ್ಯಾಸ‌ ಕಾಮತ್ ಆಗಮಿಸಿದ್ದಾರೆ. ಇನ್ನು ಆಸ್ಪತ್ರೆ ಎದುರು ಭಾರೀ ಸಂಖ್ಯೆಯಲ್ಲಿ ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಇದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಇದೀಗ ಹಿಂದೂ ಕಾರ್ಯಕರ್ತ ಸುಹಾಸ್ ಹತ್ಯೆ ಖಂಡಿಸಿ  ಮೇ-2 ರಂದು ದಕ್ಷಿಣ ಕನ್ನಡ ಬಂದ್ ಗೆ ವಿಶ್ವಹಿಂದೂ ಪರಿಷತ್ ಕರೆ ಕೊಟ್ಟಿದೆ.

ಪೊಲೀಸ್ ಇಲಾಖೆ ಈಗಾಗಲೇ ಜಿಲ್ಲೆಯಾದ್ಯಂತ ನಾಕಾಬಂದಿ ಮಾಡಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಮಾಡಿದೆ. ಹೆಚ್ಟಿನ ಭದ್ರತೆಗಾಗಿ ಇತರ ಜಿಲ್ಲೆಗಳಿಂದಲೂ ಪೊಲೀಸ್ ಸಿಬ್ಬಂದಿಗಳನ್ನು ಜಿಲ್ಲೆಗೆ ಕರೆಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *