Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಟ್ಲ: ಕುರುಂಬಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ; ನೆರೆಮನೆ ನಿವಾಸಿಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ಪ್ರಾಣಾಪಾಯ!

Spread the love

ವಿಟ್ಲ : ವಿಟ್ಲ ಕಸಬಾ ಗ್ರಾಮದ ಕುರುಂಬಳ ಎಂಬಲ್ಲಿ ರವಿವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಏಕಾಏಕಿ ಸ್ಫೋಟಗೊಂಡು ಮನೆ ಜಖಂಗೊಂಡಿದೆ. ನೆರೆಮನೆಯ ನಿವಾಸಿಯೊಬ್ಬರು ತೋರಿದ ಸಮಯಪ್ರಜ್ಞೆಯಿಂದಾಗಿ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಕುರುಂಬಳದ ಹಮೀದ್ ಎಂಬುವರ ಮನೆಯಲ್ಲಿ ಪೂರ್ವಾಹ್ನ 11 ಗಂಟೆಯ ಸುಮಾರಿಗೆ ಈ ದುರಂತ ಸಂಭವಿಸಿದೆ. ಮನೆಯ ಮಾಲೀಕ ಹಮೀದ್ ಅವರು ಪೇಟೆಗೆ ತೆರಳಿದ್ದಾಗ, ಅವರ ಪತ್ನಿ ಖೈರುನ್ನಿಸಾ ಅವರು ಅಡುಗೆ ಕೋಣೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಸಿಲಿಂಡರ್‌ನ ರೆಗ್ಯುಲೇಟರ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಗಾಬರಿಗೊಂಡ ಖೈರುನ್ನಿಸಾ ಅವರು ಬೊಬ್ಬೆ ಹೊಡೆದಿದ್ದು, ಧ್ವನಿ ಕೇಳಿ ನೆರೆಯ ನಿವಾಸಿ ಉಮರ್ ಎಂಬುವವರು ತಕ್ಷಣ ಓಡಿಬಂದಿದ್ದಾರೆ. ಸನ್ನಿವೇಶದ ಗಂಭೀರತೆಯನ್ನು ಅರಿತ ಉಮರ್, ತಕ್ಷಣವೇ ಮನೆಯಲ್ಲಿದ್ದವರನ್ನು ಅಂಗಳಕ್ಕೆ ಕರೆದೊಯ್ದು ಸುರಕ್ಷಿತವಾಗಿ ಹೊರತರಲು ಯಶಸ್ವಿಯಾಗಿದ್ದಾರೆ. ಅವರು ಹೊರಬಂದ ಕೆಲವೇ ಕ್ಷಣಗಳಲ್ಲಿ ಸಿಲಿಂಡರ್ ಭೀಕರವಾಗಿ ಸ್ಫೋಟಗೊಂಡಿದೆ.

ಸ್ಫೋಟದ ತೀವ್ರತೆಗೆ ಮನೆಯ ಗೋಡೆಗಳು ಬಿರುಕು ಬಿಟ್ಟಿದ್ದು, ಅಡುಗೆ ಕೋಣೆ ಸಂಪೂರ್ಣವಾಗಿ ಧ್ವಂಸಗೊಂಡಿದೆ. ಮನೆಯಲ್ಲಿದ್ದ ಪೀಠೋಪಕರಣಗಳು, ಅಗತ್ಯ ದಾಖಲೆಗಳು ಹಾಗೂ ಗೃಹಬಳಕೆಯ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ. ಘಟನೆ ತಿಳಿಯುತ್ತಿದ್ದಂತೆಯೇ ವಿಟ್ಲ ಪೊಲೀಸ್ ಠಾಣೆಯ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *