ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ 6 ತಿಂಗಳು ನಿರಂತರ ಲೈಂಗಿಕ ದೌರ್ಜನ್ಯ; ಪೋಕ್ಸೋ ಕಾಯ್ದೆಯಡಿ ಮೂವರು ಆರೋಪಿಗಳ ಬಂಧನ!

ವಿಟ್ಲ: ಅಪ್ರಾಪ್ತ ಬಾಲಕನೋರ್ವನ ಮೇಲೆ ಆರು ತಿಂಗಳ ಕಾಲ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ ಅತ್ಯಂತ ಕೃತ್ಯಕ್ಕೆ ಸಂಬಂಧಿಸಿದಂತೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಬರೋಬ್ಬರಿ 6 ಪೋಕ್ಸೋ ಪ್ರಕರಣಗಳು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಜವಾದ್, ಶಾಹಿದ್ ಮತ್ತು ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂದು ಗುರುತಿಸಲಾಗಿದೆ.

ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿರುವ ಸಂತ್ರಸ್ತ ಬಾಲಕ ನೀಡಿದ ದೂರಿನ ಪ್ರಕಾರ, 2026ನೇ ಸಾಲಿನ ಫೆಬ್ರವರಿ ತಿಂಗಳಿನಿಂದ ಆಗಸ್ಟ್ ತಿಂಗಳ ಅವಧಿಯಲ್ಲಿ ಆರೋಪಿಗಳಾದ ಜವಾದ್, ಶಾಹಿದ್, ರಿಯಾಝ್ @ ಅಬ್ದುಲ್ ಗಫೂರ್ ಹಾಗೂ ಇತರ ಮೂವರು ಆತನ ಮೇಲೆ ಹಂತ ಹಂತವಾಗಿ ಲೈಂಗಿಕ ದೌರ್ಜನ್ಯವೆಸಗಿದ್ದಾರೆ. ಈ ಕುರಿತು ಸಂತ್ರಸ್ತ ಬಾಲಕ ದಿನಾಂಕ 04-09-2026 ರಂದು ವಿಟ್ಲ ಪೊಲೀಸ್ ಠಾಣೆಗೆ ಆಗಮಿಸಿ ಅಧಿಕೃತ ದೂರು ನೀಡಿದ್ದ.
ಬಾಲಕ ನೀಡಿದ ದೂರಿನ ಮೇರೆಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಒಟ್ಟು 6 ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆ ಅಡಿಯಲ್ಲಿ ಕಠಿಣ ಪ್ರಕರಣಗಳನ್ನು ಕಾಯ್ದಿರಿಸಲಾಗಿದೆ.
ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ತಕ್ಷಣವೇ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಕಾರ್ಯಾಚರಣೆ ನಡೆಸಿ ಪ್ರಮುಖ ಆರೋಪಿಗಳಾದ ಜವಾದ್, ಶಾಹಿದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಅವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರ ಮೂವರು ಆರೋಪಿಗಳ ಪತ್ತೆಗೆ ಪೊಲೀಸರು ಜಾಲ ಬೀಸಿದ್ದಾರೆ.