Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಟ್ಲ: ಕೋಟಿಕೆರೆಯಲ್ಲಿ ಈಜಲು ತೆರಳಿದ್ದ ಎಸ್‌ಸಿಡಿಸಿಸಿ ಬ್ಯಾಂಕ್ ಉದ್ಯೋಗಿ ನೀರಿನಲ್ಲಿ ಮುಳುಗಿ ದುರ್ಮರಣ!

Spread the love

ವಿಟ್ಲ : ವಿಟ್ಲದ ಕೋಟಿಕೆರೆ ಎಂಬಲ್ಲಿ ಈಜಲು ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟ ಕರುಣಾಜನಕ ಘಟನೆ ಬೆಳಗಿನ ಜಾವ ನಡೆದಿದೆ. ಮೃತರನ್ನು ವಿಟ್ಲ ಕಸಬಾ ಗಾಳಿಹಿತ್ಲು ನಿವಾಸಿ ವೀರಪ್ಪ ಗೌಡ ಅವರ ಪುತ್ರ, ಎಸ್‌ಸಿಡಿಸಿಸಿ ಬ್ಯಾಂಕ್ (SCDCC Bank) ಉದ್ಯೋಗಿ ಲಿತಿನ್ (32) ಎಂದು ಗುರುತಿಸಲಾಗಿದೆ.

ಬೆಳಗಿನ ಜಾವ ಈಜಲು ಕೆರೆಗೆ ಇಳಿದಿದ್ದ ಲಿತಿನ್ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ. ಇದನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಕೆರೆಗೆ ಇಳಿದು ಅವರನ್ನು ಮೇಲಕ್ಕೆತ್ತಿ ರಕ್ಷಿಸಲು ಯತ್ನಿಸಿದ್ದಾರೆ. ಆದರೆ ಅಷ್ಟರಲ್ಲಾಗಲೇ ಲಿತಿನ್ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ. ಮೃತ ಲಿತಿನ್ ಅವರು ತಂದೆ, ತಾಯಿ, ಪತ್ನಿ ಹಾಗೂ ಪುಟ್ಟ ಮಗುವನ್ನು ಅಗಲಿದ್ದಾರೆ. ಯುವ ಬ್ಯಾಂಕ್ ಉದ್ಯೋಗಿಯ ಅಕಾಲಿಕ ಮರಣಕ್ಕೆ ಸ್ಥಳೀಯರು ಹಾಗೂ ಬ್ಯಾಂಕ್ ಸಿಬ್ಬಂದಿಗಳು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.


Spread the love
Share:

administrator

Leave a Reply

Your email address will not be published. Required fields are marked *