Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಿಟ್ಲ: ಇವಿ ಕಾರು ಹಾಗೂ ಬೈಕ್ ನಡುವೆ ಭೀಕರ ಅಪಘಾತ; ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾ*ವು!

Spread the love

ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಎಲೆಕ್ಟ್ರಿಕ್ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಕಲ್ಲೇಗ ಸಮೀಪದ ಮುರ ನಿವಾಸಿ, ರಝಾಕ್ ಸಾಹೇಬ್ ಅವರ ಪುತ್ರ ಹರ್ಷದ್ ಮೃತಪಟ್ಟ ದುರ್ದೈವಿ. ಇವರು ಪುತ್ತೂರಿನ ನೆಹರುನಗರದ ‘ರೆಕ್ಸಾ ಶಾಪ್’ನಲ್ಲಿ ಉದ್ಯೋಗಿಯಾಗಿದ್ದರು.
ಆಗಸ್ಟ್ 25ರ ಮಂಗಳವಾರದಂದು ಪರ್ಲೋಟು ಬಳಿ ಎಲೆಕ್ಟ್ರಿಕ್ ಕಾರು ಮತ್ತು ಹರ್ಷದ್ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನದ ನಡುವೆ ಭೀಕರ ಡಿಕ್ಕಿ ಸಂಭವಿಸಿತ್ತು. ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಹರ್ಷದ್ ಅವರನ್ನು ತಕ್ಷಣವೇ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ದುರಾದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ. ಘಟನೆ ಕುರಿತು ಸಂಬಂಧಪಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *