Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಯುದ್ಧದ ಭೀತಿ: ತನ್ನ ವೈಮಾನಿಕ ಮಾರ್ಗವನ್ನು ಸಂಪೂರ್ಣವಾಗಿ ಮುಚ್ಚಿದ ಯುಎಇ (UAE)

Spread the love

ಅಬುಧಾಬಿ: ಇರಾನಿನಿಂದ ಉಂಟಾದ ಕ್ಷಿಪಣಿ ಹಾಗೂ ಡೋನ್ ದಾಳಿಗಳ ಹಿನ್ನೆಲೆ ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ವಾಯುಪ್ರದೇಶವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಮುಚ್ಚಿದೆ ಎಂದು ಯುಎಇಯ ಸಾಮಾನ್ಯ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ ಎಂದು Aljazeera ವರದಿ ಮಾಡಿದೆ.
ವಿಮಾನಗಳ ಸಂಚಾರ ಮತ್ತು ವಾಯು ಸಿಬ್ಬಂದಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಜೊತೆಗೆ ದೇಶದ ವಾಯುಪ್ರದೇಶದ ರಕ್ಷಣೆಯನ್ನು ಬಲಪಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸರಕಾರಿ ಮಾಧ್ಯಮಗಳು ವರದಿ ಮಾಡಿವೆ.
ಇದಕ್ಕೂ ಮೊದಲು, ಇರಾನಿನ ಕ್ಷಿಪಣಿ ಮತ್ತು ಡೋನ್ ದಾಳಿಗಳಿಗೆ ಪ್ರತಿಕ್ರಿಯಿಸುತ್ತಿರುವುದಾಗಿ ಯುಎಇ ರಕ್ಷಣಾ ಸಚಿವಾಲಯ ತಿಳಿಸಿತ್ತು. ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *