ವಾಷಿಂಗ್ಟನ್: ಇರಾನ್-ಅಮೆರಿಕ ಸಂಘರ್ಷ; ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದಲ್ಲಿ ಭಾರಿ ಏರಿಕೆ!

ವಾಷಿಂಗ್ಟನ್: ಸ್ವಿಟ್ಜರ್ಲೆಂಡ್‌ನಲ್ಲಿ ನಡೆಯುತ್ತಿದ್ದ ಉನ್ನತ ಮಟ್ಟದ ಶಾಂತಿ ಮಾತುಕತೆಯಿಂದ ಇರಾನ್ ಹೊರ ನಡೆದ ಬೆನ್ನಲ್ಲೇ ಕಚ್ಚಾ ತೈಲ ದರ 2% ರಷ್ಟು ಏರಿಕೆ ಕಂಡಿದೆ.

ಅಂತರರಾಷ್ಟ್ರೀಯ ಮಟ್ಟದ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲದ ಬೆಲೆ ಪ್ರತಿ ಬ್ಯಾರೆಲ್‌ಗೆ 82.30 ಡಾಲರ್(7,700 ರೂ.) ತಲುಪಿದ್ದರೆ ಅಮೆರಿಕದ ವೆಸ್ಟ್ ಟೆಕ್ಸಾಸ್ ಇಂಟರ್ಮೀಡಿಯೆಟ್ ಕಚ್ಚಾ ತೈಲದ ಬೆಲೆಯೂ ಕೂಡ ಬ್ಯಾರೆಲ್‌ಗೆ 78 ಡಾಲರ್(7,300 ರೂ.) ಗಡಿಯನ್ನು ದಾಟಿದೆ.ಅಮೆರಿಕ ಮತ್ತು ಇರಾನ್ ನಡುವೆ ಸ್ವಿಟ್ಜರ್ಲೆಂಡ್‌ನಲ್ಲಿ ಅತ್ಯಂತ ಸೂಕ್ಷ್ಮವಾದ ಶಾಂತಿ ಮಾತುಕತೆಗಳು ನಡೆಯುತ್ತಿರುವ ಬೆನ್ನಲ್ಲೇ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿರುವ ಹೊಸ ಮಿಲಿಟರಿ ಬೆದರಿಕೆಯು ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ತಲ್ಲಣ ಸೃಷ್ಟಿಸಿದೆ.ಸ್ವಿಟ್ಜರ್ಲೆಂಡ್‌ನಲ್ಲಿ ಉಭಯ ದೇಶಗಳ ಪ್ರತಿನಿಧಿಗಳ ನಡುವೆ ಅತ್ಯಂತ ಮಹತ್ವದ ಮತ್ತು ಸೂಕ್ಷ್ಮ ಹಂತದ ಶಾಂತಿ ಮಾತುಕತೆಗಳು ನಡೆಯುತ್ತಿದ್ದವು. ಇದೇ ವೇಳೆ ಸಾಮಾಜಿಕ ಮಾಧ್ಯಮದಲ್ಲಿ ಟ್ರಂಪ್ ಹೊಸ ಮಿಲಿಟರಿ ಬೆದರಿಕೆ ನೀಡಿದ್ದಾರೆ. ಟ್ರಂಪ್ ಅವರ ಬೆದರಿಕೆಯ ಎಚ್ಚರಿಕೆ ಹೊರಬೀಳುತ್ತಿದ್ದಂತೆ ಇರಾನ್ ನಿಯೋಗ ಮಾತುಕತೆ ವೇದಿಕೆಯಿಂದ ಹೊರ ನಡೆದಿದೆ.ಇರಾನ್ ನಿಯೋಗ ಮಾತುಕತೆ ವೇದಿಕೆಯಿಂದ ಹೊರ ನಡೆದ ಬೆನ್ನಲ್ಲೇ, ಇದು ಜಾಗತಿಕ ತೈಲ ಪೂರೈಕೆಯಲ್ಲಿ ಮತ್ತೆ ವ್ಯತ್ಯಯ ಉಂಟಾಗಬಹುದು ಎಂಬ ಆತಂಕವನ್ನು ಹೂಡಿಕೆದಾರರಲ್ಲಿ ಮೂಡಿಸಿದೆ. ಇದು ಬೆಲೆ ಏರಿಕೆಗೆ ನೇರ ಕಾರಣವಾಗಿದೆ.