Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ವಾಷಿಂಗ್ಟನ್: ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ರಾಜೀನಾಮೆ; ಜೂನ್ 30 ರಿಂದ ಜಾರಿ!

Spread the love

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ತುಳಸಿ ಗಬ್ಬಾರ್ಡ್ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿದ್ದಾರೆ ಎಂದು ಅಮೆರಿಕದ ಮಾಧ್ಯಮಗಳು ಶುಕ್ರವಾರ ವರದಿ ಮಾಡಿವೆ.
ಶ್ವೇತಭವನದ ಅಧಿಕಾರಿಗಳು ಹಾಗೂ ಹಿರಿಯ ಆಡಳಿತ ಮೂಲಗಳನ್ನು ಉಲ್ಲೇಖಿಸಿ MS NOW ಈ ಮಾಹಿತಿ ನೀಡಿದೆ. ಅಪರೂಪದ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿರುವ ತಮ್ಮಪತಿ ಅಬ್ರಹಾಂ ಅವರಿಗೆ ಬೆಂಬಲ ನೀಡಲು ಗಬ್ಬಾರ್ಡ್ ಅವರು ಸಾರ್ವಜನಿಕ ಸೇವೆಯಿಂದ ಹಿಂದೆ ಸರಿಯಲು ನಿರ್ಧರಿಸಿರುವುದಾಗಿ ವರದಿಯಲ್ಲಿ ಹೇಳಲಾಗಿದೆ.

ಜೂನ್ 30, 2026ರಿಂದ ಅವರ ರಾಜೀನಾಮೆ ಜಾರಿಗೆ ಬರುವ ಸಾಧ್ಯತೆ ಇದೆ. ಶುಕ್ರವಾರ ನಡೆದ ಓವಲ್ ಕಚೇರಿ ಸಭೆಯಲ್ಲಿ ತಮ್ಮ ನಿರ್ಧಾರವನ್ನು ಟ್ರಂಪ್‌ ಅವರಿಗೆ ಗಬ್ಬಾರ್ಡ್ ತಿಳಿಸಿದ್ದಾರೆ ಎಂದು ಫಾಕ್ಸ್ ನ್ಯೂಸ್ ವರದಿ ಮಾಡಿದೆ.
ಈ ಕುರಿತು ಪ್ರತಿಕ್ರಿಯೆ ಕೇಳಿದಾಗ ಶ್ವೇತಭವನ ಹಾಗೂ ರಾಷ್ಟ್ರೀಯ ಗುಪ್ತಚರ ನಿರ್ದೇಶಕರ ಕಚೇರಿ ತಕ್ಷಣ ಪ್ರತಿಕ್ರಿಯಿಸಿಲ್ಲ ಎಂದು CNBC ತಿಳಿಸಿದೆ.
ಇದೇ ವೇಳೆ, ಫಾಕ್ಸ್ ನ್ಯೂಸ್ ಡಿಜಿಟಲ್ ಗಬ್ಬಾರ್ಡ್ ಅವರ ರಾಜೀನಾಮೆ ಪತ್ರದ ವಿವರಗಳನ್ನು ಪ್ರಕಟಿಸಿದೆ. ‘ನನ್ನ ಮೇಲೆ ನೀವು ಇಟ್ಟಿರುವ ನಂಬಿಕೆ ಮತ್ತು ಕಳೆದ ಒಂದೂವರೆ ವರ್ಷಗಳಿಂದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರ ಕಚೇರಿಯನ್ನು ಮುನ್ನಡೆಸಲು ಅವಕಾಶ ನೀಡಿದಕ್ಕಾಗಿ ನಾನು ಕೃತಜ್ಞಳಾಗಿದ್ದೇನೆ’ ಎಂದು ಗಬ್ಬಾರ್ಡ್ ಅವರು ಅಧ್ಯಕ್ಷ ಟ್ರಂಪ್ ಅವರಿಗೆ ಪತ್ರ ಬರೆದಿರುವುದಾಗಿ ವರದಿಯಾಗಿದೆ.


Spread the love
Share:

administrator

Leave a Reply

Your email address will not be published. Required fields are marked *