Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ಆರೋಪ; ಎರಡು ಗ್ರಾಮಗಳ ಯುವಕರ ನಡುವೆ ಮಾರಾಮಾರಿ!

Spread the love

ಬೆಳಗಾವಿ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಎಂದು ಎರಡು ಗ್ರಾಮದ ಯುವಕರ ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಸವದತ್ತಿ ತಾಲೂಕಿನ ಜಕ್ಕಬಾಳದಲ್ಲಿ ನಡೆದಿದೆ.

ಬಸ್ ಚಲಿಸುತ್ತಿದ್ದ ವೇಳೆಯೇ ಜಕ್ಕಬಾಳ ಹಾಗೂ ಬಸರಗಿ ಗ್ರಾಮದ ಯುವಕರ ನಡುವೆ ಗಲಾಟೆ ಆರಂಭವಾಗಿತ್ತು. ಬಳಿಕ ಗಲಾಟೆ ತೀವ್ರವಾಗಿ ಬಸ್‌ ನಿಲ್ಲಿಸಲಾಗಿದೆ. ಈ ವೇಳೆ ಬೆಲ್ಟ್, ಕಲ್ಲು, ಕಟ್ಟಿಗೆಯಿಂದ ಯುವಕರು ಹೊಡೆದಾಡಿಕೊಂಡಿದ್ದಾರೆ.

ಪೊಲೀಸರಿಗೆ, ವಾಯುವ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಸ್ಥಳಕ್ಕೆ ಬಂದಿಲ್ಲ ಎಂದು ಗ್ರಾಮಸ್ಥರ ಆಕ್ರೋಶ ಹೊರಹಾಕಿದ್ದಾರೆ. ಬಸ್ ನಲ್ಲಿ ಈ ರೀತಿಯ ಕಿರುಕುಳಕ್ಕೆ ಕಡಿವಾಣ ಹಾಕಲು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ


Spread the love
Share:

administrator

Leave a Reply

Your email address will not be published. Required fields are marked *