Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಚರ್ಚ್‌ನಲ್ಲಿ ಮದುವೆ ಸಂಭ್ರಮ, ಅಷ್ಟರಲ್ಲೇ ಪೊಲೀಸರ ಎಂಟ್ರಿ!: ಉದ್ಯಮಿ ದೂರು ನೀಡಿದ ಬೆನ್ನಲ್ಲೇ ರೌಡಿಶೀಟರ್ ಸ್ಟಾನ್ಲಿ ಅರೆಸ್ಟ್!

Spread the love

ಕೋಲಾರ: ಕೋಲಾರ ಜಿಲ್ಲೆಯ ಕೆಜಿಎಫ್‌ (KGF) ನಗರದಲ್ಲಿ ಸಿನಿಮೀಯ ಶೈಲಿಯ ಪೊಲೀಸ್ ಕಾರ್ಯಾಚರಣೆಯೊಂದು ನಡೆದಿದೆ. ಮಗಳ ಮದುವೆ ಖರ್ಚಿಗಾಗಿ ಉದ್ಯಮಿಯೊಬ್ಬರಿಗೆ ಹೆದರಿಸಿ, ಬೆದರಿಕೆ ಹಾಕಿ ಹಪ್ತಾ ವಸೂಲಿ ಮಾಡುತ್ತಿದ್ದ ಆರೋಪದ ಮೇಲೆ, ಈಗಾಗಲೇ ಗಡಿಪಾರಾಗಿದ್ದ ರೌಡಿಶೀಟರ್‌ನನ್ನು ಪೊಲೀಸರು ಮದುವೆ ಮಂಟಪದಿಂದಲೇ ವಶಕ್ಕೆ ಪಡೆದಿದ್ದಾರೆ. ಕೆಜಿಎಫ್ ನಗರದ ಸುಸೈಪಾಳ್ಯಂ ಏರಿಯಾದ ನಿವಾಸಿ, ಕುಖ್ಯಾತ ರೌಡಿಶೀಟರ್ ಸ್ಟಾನ್ಲಿ ಬಂಧಿತ ಆರೋಪಿಯಾಗಿದ್ದಾನೆ. ಚರ್ಚ್‌ನಲ್ಲಿ ಮಗಳ ಮದುವೆ ಸಂಭ್ರಮದಲ್ಲಿದ್ದ ರೌಡಿಯನ್ನು ಪೊಲೀಸರು ಏಕಾಏಕಿ ಕಾರ್ಯಾಚರಣೆ ನಡೆಸಿ ಹೊತ್ತೊಯ್ದಿರುವ ದೃಶ್ಯ ಈಗ ವೈರಲ್ ಆಗಿದೆ.
ಪೊಲೀಸ್ ಮೂಲಗಳ ಪ್ರಕಾರ, ಮಗಳ ಮದುವೆಗೆ ಪೆಂಡಾಲ್ ಹಾಗೂ ಡೆಕೋರೇಷನ್ ಕೆಲಸ ಮಾಡಿಕೊಡುತ್ತಿದ್ದ ಅಂಗಡಿ ಮಾಲೀಕ ಮೊಹಮ್ಮದ್ ಸಕ್ಲೇನ್ ಎಂಬುವರಿಗೆ ರೌಡಿಶೀಟರ್ ಸ್ಟಾನ್ಲಿ ಭೀತಿ ಹುಟ್ಟಿಸಿದ್ದ. ತನಗೆ ಹೆದರಿಸಿ, ಬೆದರಿಕೆ ಹಾಕಿ ತನ್ನ ಮಗಳ ಮದುವೆಗೆ ಹಣ ನೀಡುವಂತೆ ಪೀಡಿಸುತ್ತಿದ್ದಾನೆ ಎಂದು ಸಂತ್ರಸ್ತ ಉದ್ಯಮಿ ಪೊಲೀಸರಿಗೆ ದೂರು ನೀಡಿದ್ದರು. ಈಗಾಗಲೇ ನಗರದಿಂದ ಗಡಿಪಾರಾಗಿದ್ದರೂ ಕಾನೂನು ಉಲ್ಲಂಘಿಸಿ ನಗರದೊಳಗೆ ಪ್ರವೇಶಿಸಿದ್ದಲ್ಲದೆ, ಸಾರ್ವಜನಿಕರಿಗೆ ಹಪ್ತಾ ವಸೂಲಿಗಾಗಿ ಕಿರುಕುಳ ನೀಡುತ್ತಿದ್ದ ದೂರು ಬಂದ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಅಲರ್ಟ್ ಆಗಿದ್ದಾರೆ.
ಕೆಜಿಎಫ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶಿವಾಂಶು ರಜಪೂತ್ ಅವರ ಖಡಕ್ ಸೂಚನೆ ಮೇರೆಗೆ ಕಾರ್ಯಾಚರಣೆಗೆ ಇಳಿದ ಆಂಡರ್ಸನ್‌ಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ತಂಡ, ಸುಸೈಪಾಳ್ಯಂ ಚರ್ಚ್‌ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಜಾಗಕ್ಕೆ ಲಗ್ಗೆ ಇಟ್ಟಿದ್ದಾರೆ. ಮದುವೆ ಮಂಟಪದಲ್ಲೇ ಇದ್ದ ಆರೋಪಿ ಸ್ಟಾನ್ಲಿಯನ್ನು ಸುತ್ತುವರಿದು ಸಿನಿಮೀಯ ಶೈಲಿಯಲ್ಲಿ ಎಳೆದೊಯ್ದಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿ ಕರೆದೊಯ್ಯುತ್ತಿರುವ ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ.


Spread the love
Share:

administrator

Leave a Reply

Your email address will not be published. Required fields are marked *