Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ-ಚೀನಾವನ್ನು ಎತ್ತಿಕಟ್ಟುತ್ತಿವೆ: ಲಾವ್ರೊವ್ ವಾಗ್ದಾಳಿ

Spread the love

ಮಾಸ್ಕೋ: ಪಾಶ್ಚಿಮಾತ್ಯ ರಾಷ್ಟ್ರಗಳು ಭಾರತ ಮತ್ತು ಚೀನಾವನ್ನು ಪರಸ್ಪರ ಎತ್ತಿಕಟ್ಟುತ್ತಿವೆ ಎಂದು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಹೇಳಿದ್ದಾರೆ.

ಪಾಶ್ಚಿಮಾತ್ಯ ರಾಷ್ಟ್ರಗಳು ಚೀನಾ, ಭಾರತದ ಮೇಲೆ ಕಣ್ಣಿಟ್ಟಿದೆ. ಆಸಿಯಾನ್ ಭಾಗದಲ್ಲಿ ಪ್ರಮುಖ ಪಾತ್ರ ವಹಿಸಲು ಪಾಶ್ಚಿಮಾತ್ಯ ರಾಷ್ಟ್ರಗಳು ಈ ರೀತಿ ಮಾಡುತ್ತಿವೆ ಎಂದು ಆರೋಪಿಸಿದ್ದಾರೆ. ಆಸಿಯಾನ್ ಪಾತ್ರವನ್ನು ದುರ್ಬಲಗೊಳಿಸಲು ಪಶ್ಚಿಮ ಪ್ರಯತ್ನಿಸುತ್ತಿದೆ. ಹೀಗಾಗಿ ಯುರೇಷಿಯಾದಲ್ಲಿ ಸಾಮೂಹಿಕ ಭದ್ರತಾ ವ್ಯವಸ್ಥೆಗಾಗಿ ಕಾಲ ಕೂಡಿ ಬಂದಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಆಫ್ರಿಕಾದಲ್ಲಿ ಉಪ-ಪ್ರಾದೇಶಿಕ ಸ್ವರೂಪಗಳ ಜೊತೆಗೆ ಆಫ್ರಿಕನ್ ಒಕ್ಕೂಟ ಸ್ಥಾಪನೆಯಾಗಿದೆ. ಲ್ಯಾಟಿನ್ ಅಮೆರಿಕ ಮತ್ತು ಕೆರಿಬಿಯನ್‌ನಲ್ಲಿ ಲ್ಯಾಟಿನ್ ಅಮೆರಿಕನ್ ಮತ್ತು ಕೆರಿಬಿಯನ್ ರಾಜ್ಯಗಳ ಸಮುದಾಯ (CELAC) ರಚನೆಯಾಗಿದೆ. ಆದರೆ ಇಲ್ಲಿಯವರೆಗೆ ಯುರೇಷಿಯಾದಲ್ಲಿ ಇದುವರೆಗೂ ಅಂತಹ ಯಾವುದೇ ಸಾಮೂಹಿಕ ಸಂಘಟನೆ ರಚನೆಯಾಗಿಲ್ಲ ಎಂದು ತಿಳಿಸಿದರು.


Spread the love
Share:

administrator

Leave a Reply

Your email address will not be published. Required fields are marked *