Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಪ್ರಯಾಣಿಕರಿಗೆ ಬಂದ ತುರ್ತು ಸಂದೇಶವೇನು?

Spread the love

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ನಡೆಯುತ್ತಲ್ಲೇ ಇದೆ. ಆದರೆ ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಜಾಗ ಗುರುತಿಸುವ ಕೆಲಸವೂ ಆಗಿಲ್ಲ. ಕೇಂದ್ರ ಸರ್ಕಾರವು ನಿರಾಸಕ್ತಿಯನ್ನು ಮುಂದುವರಿಸಿದೆ.

ಇದರ ನಡುವೆ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗುತ್ತಲ್ಲೇ ಇದೆ. ಇದೀಗ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಿಂದ ಪ್ರಯಾಣಿಕರಿಗೆ ಮಹತ್ವದ ಸಲಹೆಯೊಂದನ್ನು ನೀಡಲಾಗಿದೆ. ಅದರ ವಿವರ ನೋಡೋಣ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲೆ ಒತ್ತಡ ಹೆಚ್ಚಾಗಿದೆ. ಭವಿಷ್ಯದಲ್ಲಿ ಬೆಂಗಳೂರಿಗೆ ಮತ್ತೊಂದು ಅಥವಾ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣವಾಗಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದರು. ಈ ನಡುವೆ ಬೆಂಗಳೂರಿನ ವಿಮಾನ ನಿಲ್ದಾಣದಿಂದ ಮಹತ್ವದ ಸಂದೇಶವನ್ನು ಹಂಚಿಕೊಳ್ಳಲಾಗಿದೆ. ಇದು ಮುಂದಿನ ದಿನಗಳಲ್ಲಿ ಬೆಂಗಳೂರು ವಿಮಾನ ನಿಲ್ದಾಣದ ಮೇಲೆ ಕಾರ್ಯದೊತ್ತಡ ಹೆಚ್ಚಾಗುವ ಸಾಧ್ಯತೆಯ ಮುನ್ಸೂಚನೆ ಎಂದೂ ವಿಶ್ಲೇಷಿಸಲಾಗುತ್ತಿದೆ.

ಪ್ರಯಾಣಿಕರು ಭದ್ರತಾ ತಪಾಸಣೆಗೆ ಸಾಕಷ್ಟು ಸಮಯಾವಕಾಶವನ್ನು ಮೀಸಲಿಟ್ಟು ಪ್ರಯಾಣವನ್ನು ಯೋಜಿಸಿ. ಹೆಚ್ಚಿನ ಮಾಹಿತಿಗಾಗಿ, ಪ್ರಯಾಣ ಮಾಡಲಿರುವ ವಿಮಾನಯಾನ ಸಂಸ್ಥೆಯನ್ನು ಸಂಪರ್ಕಿಸುವಂತೆ ಕೋರುತ್ತೇವೆ. ವಿಮಾನ ನಿಲ್ದಾಣದಲ್ಲಿ ಹೆಚ್ಚುವರಿ ಸಮಯವನ್ನು ಆಹ್ಲಾದಕರವಾಗಿ ವಿನಿಯೋಗಿಸಲು ವ್ಯಾಪಾರಿ, ಆಹಾರ ಮತ್ತು ಪಾನೀಯ ಮಳಿಗೆಗಳು, ವಿಶ್ರಾಂತಿ ಲೌಂಜ್‌ಗಳಂತಹ ವಿವಿಧ ಸೇವೆಗಳನ್ನು ಅನುಭವಿಸಬಹುದಾಗಿದೆ. ನಿಮ್ಮ ಪ್ರಯಾಣ ಸುಖಕರವಾಗಿರಲಿ! ಎಂದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಕಟಣೆ ಹೊರಡಿಸಿದೆ.

ಇದಕ್ಕೆ ಮುಖ್ಯ ಕಾರಣ ಸ್ವಾತಂತ್ರ್ಯ ದಿನಾಚರಣೆ. ಸ್ವಾತಂತ್ರ್ಯ ದಿನಾಚರಣೆ ಇರುವುದರಿಂದ ಈ ವಾರ ವಿಮಾನ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗುವ ಸಾಧ್ಯತೆ ಇದೆ. ಅಲ್ಲದೇ ಹೆಚ್ಚಿನ ಭದ್ರತಾ ಕ್ರಮಗಳ ಕಾರಣದಿಂದ ಆಗಸ್ಟ್‌ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರಿನಲ್ಲಿ ಪ್ರಯಾಣಿಕರ ತಪಾಸಣೆ ಪ್ರಕ್ರಿಯೆಗಳು ಸ್ವಲ್ಪ ವಿಳಂಬವಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ, ಪ್ರಯಾಣಿಕರು ತಮ್ಮ ವಿಮಾನ ಪ್ರಯಾಣವನ್ನು ಪ್ಲ್ಯಾನ್ ಮಾಡಿಕೊಳ್ಳುವ ಸಂದರ್ಭದಲ್ಲಿ ಭದ್ರತಾ ಪರಿಶೀಲನೆಗೆ ಹೆಚ್ಚುವರಿ ಸಮಯವನ್ನು ಮೀಸಲಿಡಬೇಕು ಎಂದು ಸೂಚನೆ ನೀಡಲಾಗಿದೆ.

ಭದ್ರತೆ ಹೆಚ್ಚಳ: ಇನ್ನು ಆಗಸ್ಟ್‌ 15ರಂದು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ದೇಶದಾದ್ಯಂತ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಾಮಾನ್ಯವಾಗಿ ವಿಶೇಷ ದಿನಗಳಲ್ಲಿ ದೇಶದಾದ್ಯಂತ ಪ್ರಮುಖ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಿರಲಾಗುತ್ತದೆ. ಅದರಲ್ಲೂ ವಿಮಾನ ನಿಲ್ದಾಣಗಳಲ್ಲಿ ಬಿಗಿ ಬಂದೋಬಸ್ತ್‌ ಮತ್ತು ತಪಾಸಣೆಯನ್ನು ಹೆಚ್ಚಿಸಲಾಗಿದೆ.


Spread the love
Share:

administrator

Leave a Reply

Your email address will not be published. Required fields are marked *