ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿ ಕೊಚ್ಚಿ ಹೋಯ್ತು!

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲಿಪುರ ಬಳಿಯ ತುಂಗಭದ್ರಾ ಜಲಾಶಯದ HLC ಕಾಲುವೆ ಬಳಿ ಕಾರು ತೊಳೆಯುವಾಗ ಆಕಸ್ಮಿಕವಾಗಿ ಕಾಲುವೆಗೆ ಜಾರಿದ ಕಾರು ಕೊಚ್ಚಿ ಹೋಗಿದೆ. ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳೀಯರ ಮತ್ತು ಅಗ್ನಿಶಾಮಕ ದಳದ ಸಹಾಯದಿಂದ ಕಾರನ್ನು ಹೊರತೆಗೆಯಲಾಗಿದ್ದು, ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
