ಟೋಲ್ ಏಕೆ ಸಂಗ್ರಹಿಸುತ್ತೀರಿ? NHAI ಅಧಿಕಾರಿಗಳಿಗೆ ಡಿಸಿ ಕಿಡಿ

ಸಂದರ್ಭಗಳಲ್ಲಿ ಟೋಲ್ ಸಂಗ್ರಹ ಮಾಡಬಾರದು ಎಂಬುದಾಗಿ ಇತ್ತೀಚೆಗೆ ನ್ಯಾಯಾಲಯ ತೀರ್ಪು ನೀಡಿದೆ. ಹೀಗಿದ್ದಾಗ, ರಸ್ತೆ ಸರಿ ಇಲ್ಲದ ಕಡೆಗಳಲ್ಲಿ ಟೋಲ್ ಏಕೆ ಸಂಗ್ರಹಿಸುತ್ತೀರಿ? ಜಿಲ್ಲಾಧಿಕಾರಿ ಟಿ.ವೆಂಕಟೇಶ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಪ್ರಶ್ನಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು, ಮಾತನಾಡಿದರು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಕೆಲವೆಡೆ ರಸ್ತೆಗಳು ಬಹಳಷ್ಟು ಹಾಳಾಗಿದ್ದು, ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ, ರಸ್ತೆ ಕಾಮಗಾರಿಗಳಿಗಾಗಿ ಮಾರ್ಗ ಬದಲಾಯಿಸಿ, ಸಂಚಾರ ದಟ್ಟಣೆ ಹಾಗೂ ಅಪಘಾತಗಳು ಕೂಡ ಸಂಭವಿಸುತ್ತಿವೆ. ಟೋಲ್ ಸಂಗ್ರಹಣೆ ಕೇಂದ್ರಗಳ ಪೈಕಿ ಕೆಲವನ್ನು ಬಂದ್ ಮಾಡಿ, ಕೇವಲ ಒಂದೆರಡು ಕೇಂದ್ರಗಳನ್ನು ಮಾತ್ರ ತೆರೆಯುವುದರಿಂದ, ವಾಹನ ದಟ್ಟಣೆ ಉಂಟಾಗುತ್ತಿದೆ. ವಿಐಪಿ, ಆಯಂಬುಲೆನ್ಸ್ ವಾಹನಗಳು ಸಂಚರಿಸುವ ಮಾರ್ಗದಲ್ಲಿ ಲಾರಿ, ಟ್ರಕ್‌ಗಳು ಕೂಡ ಪ್ರವೇಶ ಮಾಡುತ್ತಿದ್ದು, ವಿಐಪಿ, ಆಯಂಬುಲೆನ್ಸ್‌ಗಳು ಟೋಲ್ ಮಾರ್ಗ ಪ್ರವೇಶಿಸಲು ಕಾಯುವಂತ ಸ್ಥಿತಿ ಇರುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಎರಡು ದಿನದೊಳಗೆ ರಸ್ತೆ ಕಾಮಗಾರಿ ಮುಗಿಸಿ
ರಾಷ್ಟ್ರೀಯ ಹೆದ್ದಾರಿ ಎನ್.ಎಚ್. 48ರ ಚಿತ್ರದುರ್ಗದಿಂದ ಬೆಂಗಳೂರು ಕಡೆ ಹೋಗುವ ರಸ್ತೆಯಲ್ಲಿ ಜೆ.ಜೆ. ಹಳ್ಳಿ ರಸ್ತೆ ಕಾಮಗಾರಿ ನಡೆಯುತ್ತಿದ್ದು, ಸುಗಮ ಸಂಚಾರಕ್ಕೆ ಸೂಕ್ತ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು. ಎರಡು ದಿನದೊಳಗೆ ರಸ್ತೆ ಕಾಮಗಾರಿ ಮುಗಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಎರಡು ದಿನದೊಳಗೆ ಕಾಮಗಾರಿ ಪೂರ್ಣಗೊಳಿಸಿದ್ದರೆ ಸಂಬಂಧಪಟ್ಟ ಗುತ್ತಿಗೆದಾರರನ್ನು ಬಂಧಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿಅಳವಡಿಸಿರುವ ಸಿಸಿ ಕ್ಯಾಮೆರಾಗಳು ಗುಣಮಟ್ಟದ್ದಾಗಿಲ್ಲ, ವಿಡಿಯೋದಲ್ಲಿಕನಿಷ್ಟ ಪಕ್ಷ ವಾಹನದ ನಂಬರ್ ಕೂಡ ಗೋಚರಿಸುವುದಿಲ್ಲ, ಹೀಗಾಗಿ ಇದರಿಂದ ಏನೂ ಪ್ರಯೋಜನವಿಲ್ಲಎಂದು ಡಿವೈಎಸ್‌ಪಿ ರಾಜಣ್ಣ ಹೇಳಿದರು. ಇದಕ್ಕೆ ಸ್ಪಂದಿಸಿದ ಡಿಸಿ, ಕೂಡಲೇ ಗುಣಮಟ್ಟದ ಸಿಸಿ ಕ್ಯಾಮೆರಾಗಳನ್ನು ರಾಷ್ಟ್ರೀಯ ಹೆದ್ದಾರಿಗಳಲ್ಲಿಅಳವಡಿಸಲು ಕ್ರಮ ವಹಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಆರ್‌ಟಿಒ ಭರತ್ ಕಾಳೆಸಿಂಗೆ ಮಾತನಾಡಿ, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿಒಟ್ಟು 25205 ಟ್ರ್ಯಾಕ್ಟರ್‌ಗಳು ಹಾಗೂ 151 ವಾಣಿಜ್ಯ ಟ್ರ್ಯಾಕ್ಟರ್‌ಗಳು ಇವೆ. ಆರ್‌ಸಿ ಅವಧಿ ಮುಗಿದಿರುವ ಹಳೆ ಟ್ರ್ಯಾಕ್ಟರ್‌ಗಳು, ನವೀಕರಣಕ್ಕೂ ಬಾರದೆ ಸಂಚರಿಸುತ್ತಿವೆ. ಕೃಷಿ ಉಪಯೋಗಕ್ಕಾಗಿ ಎಂದು ನೋಂದಣಿಯಾಗಿರುವ ಟ್ರ್ಯಾಕ್ಟರ್‌ಗಳನ್ನು ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುತ್ತಿರುವುದು ಕೂಡ ಕಂಡುಬಂದಿದೆ. ಹಂತ ಹಂತವಾಗಿ ಇಂತಹ ಟ್ರ್ಯಾಕ್ಟರ್‌ಗಳನ್ನು ಪತ್ತೆ ಮಾಡಿ, ಸೂಕ್ತ ಕ್ರಮ ಜರುಗಿಸಲಾಗುವುದು ಎಂದರು.
ಸಭೆಯಲ್ಲಿಎಸ್ಪಿ ರಂಜಿತ್ ಕುಮಾರ್ ಬಂಡಾರು, ಜಿಪಂ ಉಪಕಾರ್ಯದರ್ಶಿ ಡಾ.ರಂಗಸ್ವಾಮಿ, ಲೋಕೋಪಯೋಗಿ ಇಲಾಖೆ ಇಇ ನಾಗರಾಜ್ ಸೇರಿದಂತೆ ನಾನಾ ಇಲಾಖೆಯ ಅಧಿಕಾರಿಗಳು ಇದ್ದರು.
ಚಿತ್ರದುರ್ಗದಲ್ಲಿ ಬಹುಹಂತದ ಪಾರ್ಕಿಂಗ್ ಕಟ್ಟಡಕ್ಕೆ ಡಿಪಿಆರ್
ಚಿತ್ರದುರ್ಗ ನಗರದ ಗಾಂಧಿ ವೃತ್ತದ ಬಳಿ ಇರುವ ನಗರಸಭೆಗೆ ಸೇರಿದ ಜಾಗದಲ್ಲಿಬಹು ಹಂತದ ಪಾರ್ಕಿಂಗ್ ಕಟ್ಟಡವನ್ನು ನಿರ್ಮಿಸಲು ಈಗಾಗಲೇ ಡಿಪಿಆರ್ ಸಿದ್ಧಪಡಿಸಲಾಗುತ್ತಿದ್ದು, ಡಿಪಿಆರ್‌ಗೆ ಸರಕಾರದಿಂದ ಅನುಮೋದನೆ ದೊರೆತ ಬಳಿಕ ಇಲ್ಲಿಸುಸಜ್ಜಿತ ಬಹುಹಂತದ ಪಾರ್ಕಿಂಗ್ ಸ್ಥಳ ನಿರ್ಮಾಣವಾಗಲಿದೆ. ಸಂತೆಹೊಂಡ ಪಕ್ಕದಲ್ಲಿನಿರ್ಮಾಣಗೊಂಡು, ಸ್ಥಗಿತಗೊಂಡಿರುವ ಕಾಮಗಾರಿಯನ್ನು ಪೂರ್ಣಗೊಳಿಸಿ, ಇಲ್ಲಿನೆಲ ಮಹಡಿಯಲ್ಲಿಪಾರ್ಕಿಂಗ್‌ಗೆ ಹಾಗೂ ಮೇಲ್ಭಾಗದಲ್ಲಿತರಕಾರಿ ಅಂಗಡಿಗಳಿಗೆ ಮಳಿಗೆ ನಿರ್ಮಿಸಲಾಗುವುದು ಎಂದು ನಗರಸಭೆ ಪೌರಾಯುಕ್ತೆ ರೇಣುಕಾ ಸಭೆಗೆ ಮಾಹಿತಿ ನೀಡಿದರು.
