Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

“ಬ್ಯಾಲೆಟ್ ಪೇಪರ್‌ನಲ್ಲಿ ಗೆಲ್ಲಿ”: ಬಿಜೆಪಿಗೆ ಪ್ರಿಯಾಂಕಾ ಸವಾಲು

Spread the love

ನವದೆಹಲಿ: ಬ್ಯಾಲೆಟ್ ಪೇಪರ್‌ ಮೂಲಕ ನಡೆಯುವ ನ್ಯಾಯಸಮ್ಮತ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಬಿಜೆಪಿ ತನ್ನ ಶಕ್ತಿಯನ್ನು ಸಾಬೀತುಪಡಿಸುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಭಾನುವಾರ ಸವಾಲು ಹಾಕಿದ್ದಾರೆ.

ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ನವದೆಹಲಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್‌ನ ‘ವೋಟ್ ಚೋರ್, ಗಡ್ಡಿ ಛೋಡ್’ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಚುನಾವಣಾ ಆಯೋಗದ (EC) ಬೆಂಬಲವಿಲ್ಲದೆ ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಪ್ರತಿಪಾದಿಸಿದರು. ಆಡಳಿತರೂಢ ಪಕ್ಷವು “ಮತ ಗಳ್ಳತನದಿಂದ ಲಾಭ ಪಡೆಯುತ್ತಿದೆ ಎಂದು ಆರೋಪಿಸಿದರು.

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಷಿ ಅವರ ಹೆಸರನ್ನು ದೇಶವು ಮರೆಯುವುದಿಲ್ಲ. ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಅವರು ಹೇಗೆ “ಪಿತೂರಿ” ಮಾಡಿದರು ಎಂಬುದನ್ನು ಅವರು ಒಂದು ದಿನ ಉತ್ತರಿಸಬೇಕಾಗುತ್ತದೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಯು ಒಮ್ಮೆ ಬ್ಯಾಲೆಟ್ ಪೇಪರ್‌ನಲ್ಲಿ ನ್ಯಾಯಯುತ ಚುನಾವಣೆಯನ್ನು ಎದುರಿಸಬೇಕು ಎಂದು ಅವರಿಗೆ ಸವಾಲ್ ಹಾಕುತ್ತೇನೆ. ಅವರು ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ಬಿಜೆಪಿಗೂ ಈ ಸತ್ಯ ತಿಳಿದಿದೆ” ಎಂದು ಹೇಳಿದರು.


Spread the love
Share:

administrator

Leave a Reply

Your email address will not be published. Required fields are marked *