Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಹೆರಿಗೆ ನಂತರ ತೀವ್ರ ರಕ್ತಸ್ರಾವದಿಂದ ಮಹಿಳೆ ನಿಧನ: ವೈದ್ಯಕೀಯ ನಿರ್ಲಕ್ಷ್ಯ ಶಂಕೆ

Spread the love

ಸುಳ್ಯ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೋರ್ವರು ಹೆರಿಗೆ ನಂತರ ಉಂಟಾದ ತೀವ್ರ ರಕ್ತಸ್ರಾವದಿಂದ ಅಸ್ವಸ್ಥಗೊಂಡು ಮೃತಪಟ್ಟಿದ್ದು, ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮೃತರನ್ನು ಸುಳ್ಯ ತಾಲೂಕು ಸಂಪಾಜೆ ಗ್ರಾಮದ ಕೊಯನಾಡು ಬಾಬು ಮಲೆಕುಡಿಯ ಮತ್ತು ಚಿನ್ನಮ್ಮ ದಂಪತಿ ಪುತ್ರಿ, ಬೆಳ್ತಂಗಡಿ ನಾರಾವಿ ಗ್ರಾಮದ ನೂಜೋಡಿ ಮಾಪಾಲ ಮನೆ ನಿವಾಸಿ ಶೇಖರ ಮಲೆಕುಡಿಯ ಅವರ ಪತ್ನಿ ಮಧುರಾ (29) ಎಂದು ಗುರುತಿಸಲಾಗಿದೆ.ಮಧುರಾ ಅವರಿಗೆ ಆರು ವರ್ಷಗಳ ಹಿಂದೆ ಮದುವೆಯಾಗಿದ್ದು, ಮೂರೂವರೆ ವರ್ಷದ ಮಗನಿದ್ದಾನೆ. ಎರಡನೇ ಹೆರಿಗೆಗಾಗಿ ಜೂನ್ 2 ರಂದು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಜೂನ್ 3 ರಂದು ಸಂಜೆ 6:45 ಕ್ಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಆದರೆ, ರಾತ್ರಿ 9 ಗಂಟೆ ಸುಮಾರಿಗೆ ಅವರಿಗೆ ತೀವ್ರ ರಕ್ತಸ್ರಾವ ಆರಂಭವಾಯಿತು.ವೈದ್ಯರ ಸಲಹೆಯಂತೆ, ಅಂಬ್ಯುಲೆನ್ಸ್ನಲ್ಲಿ ರಾತ್ರಿ 11:30 ಕ್ಕೆ ಮಧುರಾ ಅವರನ್ನು ಮಂಗಳೂರಿನ ಲೇಡಿ ಗೋಷನ್ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12:37 ಕ್ಕೆ ಕೊನೆಯುಸಿರೆಳೆದಿದ್ದಾರೆ.ಮಂಗಳೂರು ಆಸ್ಪತ್ರೆಯಲ್ಲಿ ಮಧುರಾ ಅವರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿತ್ತು. ಮನೆಯವರು ಅಂಬ್ಯುಲೆನ್ಸ್ನಲ್ಲಿ ಶವವನ್ನು ನಾರಾವಿಯ ಪತಿಯ ಮನೆಗೆ ತಂದಿದ್ದರು. ಶವದ ಅಂತಿಮ ಸಂಸ್ಕಾರಕ್ಕೆ ತಯಾರಿಯನ್ನು ನಡೆಸಲಾಗಿತ್ತು. ಈ ನಡುವೆ ಮರಣೋತ್ತರ ಪರೀಕ್ಷೆ ನಡೆಸದೆ ಶವವನ್ನು ಮನೆಯವರಿಗೆ ಹಸ್ತಾಂತರಿಸಿದ ಬಗ್ಗೆ ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ ಈದು ಮತ್ತಿತ್ತರ ನಾಯಕರು ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರು.ಈ ಹಿನ್ನಲೆಯಲ್ಲಿ ಮೃತ ಮಧುರಾ ಅವರ ಕುಟುಂಬಸ್ಥರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ವಿಷಯವನ್ನು ತಿಳಿದ ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ನಾರಾವಿಯ ಮನೆಗೆ ಬಂದು ಪರಿಶೀಲನೆ ನಡೆಸಿ ಮನೆಯವರ ಜೊತೆ ಮಾತುಕತೆ ನಡೆಸಿದ್ದರು. ಬಳಿಕ ಮೃತದೇಹವನ್ನು ಪುನಃ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೋಗಿ ಶವದ ಮರಣೋತ್ತರ ಪರೀಕ್ಷೆಯನ್ನು ನಡೆಸಿ, ನಾರಾವಿಯ ಪತಿಯ ಮನೆಯ ಬಳಿ ಅಂತ್ಯಸಂಸ್ಕಾರವನ್ನು ನೆರವೇರಿಸಲಾಯಿತು.


Spread the love
Share:

administrator

Leave a Reply

Your email address will not be published. Required fields are marked *