ಗದಗದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆ ಬಲಿ

ಗದಗ : ಇತ್ತೀಚೆಗೆ ಬೀದಿ ನಾಯಿಗಳ ಹಾವಳಿ ಹೆಚ್ಚುತ್ತಿದ್ದು, ಬೀದಿ ನಾಯಿಗಳ ದಾಳಿಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.
ಗದಗದ ಗಜೇಂದ್ರಗಡ ಪಟ್ಟಣದಲ್ಲಿ ಬೀದಿ ನಾಯಿಗಳ ದಾಳಿಗೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಪ್ರೇಮವ್ವ ಚೋಳಿನ (52) ಎಂದು ಗುರುತಿಸಲಾಗಿದೆ.
ಹೂವು ತರಲು ಹೋಗಿದ್ದಾಗ ಪ್ರೇಮವ್ವ ಮೇಲೆ ಏಕಾಏಕಿ ಬೀದಿನಾಯಿಗಳು ದಾಳಿ ಮಾಡಿದ್ದು, ಚಿಕಿತ್ಸೆ ಫಲಿಸದೇ ಪ್ರೇಮವ್ವ ಸಾವನ್ನಪ್ಪಿದ್ದಾರೆ.
ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.ಮೃತರ ಸಂಬಂಧಿಕರ ಆಕ್ರಂದನ ಮುಗಿಲುಮುಟ್ಟಿದೆ.