Contact Information

The Saffron Productions
3rd Floor Kudvas Granduer
Surathkal Mangalore 575014

We Are Available 24/ 7. Call Now.

ಮಹಿಳಾ ಟೆಕ್ಕಿ ಸಾವು ಆಕಸ್ಮಿಕವಲ್ಲ, ಭೀಕರ ಕೊಲೆ! ಪ್ರೀತಿ ನಿರಾಕರಿಸಿದ್ದಕ್ಕೆ ಉಸಿರುಗಟ್ಟಿಸಿ ಕೊಂದ 18ರ ಯುವಕ

Spread the love

ಬೆಂಗಳೂರು: ಸಿಲಿಕಾನ್ ಸಿಟಿಯ ರಾಮಮೂರ್ತಿ ನಗರದಲ್ಲಿ (Ramamurthy Nagar) ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಉಸಿರುಗಟ್ಟಿ ಮಹಿಳಾ ಟೆಕ್ಕಿ ಸಾವನ್ನಪ್ಪಿರುವ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ ಆಕೆಯನ್ನು ಕೊಲೆ ಮಾಡಿರುವುದು ತನಿಖೆ ವೇಳೆ ಬಲಿಯಾಗಿದೆ.

ಶರ್ಮಿಳಾ (34) ಮೃತ ದುರ್ದೈವಿ. ಮೂಲತಃ ಮಂಗಳೂರಿನವರು. ಒಂದು ವರ್ಷದ ಹಿಂದೆಯಷ್ಟೇ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ ವೇರ್ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದರು ಎಂದು ತಿಳಿದುಬಂದಿದೆ

ಜನವರಿ 3ರ ರಾತ್ರಿ ಘಟನೆ ನಡೆದಿದ್ದು, ಜ.5ರಂದು ಬೆಳಕಿಗೆ ಬಂದಿದೆ. ಘಟನೆ ನಡೆದ ದಿನ ರಾತ್ರಿ 10.30ರ ಸುಮಾರಿಗೆ ಶರ್ಮಿಳಾ ವಾಸಿಸುತ್ತಿದ್ದ ಫ್ಲ್ಯಾಟ್‌ನ ರೂಮ್‌ವೊಂದರಲ್ಲಿ ಬೆಂಕಿ ಹೊತ್ತಿಕೊಂಡು ಹೊಗೆ ಆವರಿಸಿತ್ತು. ಇದನ್ನ ನೋಡಿದ ಮನೆ ಮಾಲೀಕ ವಿಜಯೇಂದ್ರ ರಾಮಮೂರ್ತಿನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದರು. ಬೆಂಕಿ ಹೊತ್ತಿಕೊಂಡಿದ್ದ ಪರಿಣಾಮ ರೂಮಿನಿಂದ ಹೊರಬರಲಾಗದೇ ಉಸಿರುಗಟ್ಟಿ ಟೆಕ್ಕಿ ಶರ್ಮಿಳಾ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿತ್ತು.

ಈ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಯಾರಾದರೂ ಮನೆಗೆ ಬಂದು ಹೋಗಿರಬಹುದಾ ಎಂದು ಅನುಮಾನ ವ್ಯಕ್ತವಾಗಿತ್ತು. ಪೊಲೀಸರ ತನಿಖೆ ವೇಳೆ ಅನುಮಾನಾಸ್ಪದವಾಗಿ ಕಂಡ ಯುವಕ ಕರ್ನಲ್‌ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ. ಈ ವೇಳೆ ಇದು ಆಕಸ್ಮಿಕವಲ್ಲ. ಕೊಲೆ ಅನ್ನೋದು ಗೊತ್ತಾಗಿದೆ.

ಟೆಕ್ಕಿ ಶರ್ಮಿಳಾನ್ನು ಕೊಲೆ ಮಾಡಿದ್ದು ಕೇರಳ ಮೂಲದ ಹದಿನೆಂಟು ವರ್ಷದ ಕರ್ನಲ್ ಕುರಯ್. ಶರ್ಮಿಳಾ ಹಾಗೂ ಆರೋಪಿ ಅಕ್ಕಪಕ್ಕದ ನಿವಾಸಿಗಳು. ಸಾಮಾನ್ಯವಾಗಿ ಶರ್ಮಿಳಾ ಆರೋಪಿ ಕರ್ನಲ್ ಎದುರು ಬಂದಾಗ ಸ್ಮೈಲ್‌ ಕೊಟ್ಟು ಮಾತನಾಡಿಸುತ್ತಿದ್ದಳು. ಇದನ್ನೇ ಪ್ರೀತಿ ಎದುಕೊಂಡಿದ್ದ ಆರೋಪಿ ಆಕೆಯನ್ನು ನಿಜವಾಗಿಯೂ ಪ್ರೀತಿಸಲು ಆರಂಭಿಸಿದ್ದ. ಘಟನೆ ನಡೆದ ದಿನ ರಾತ್ರಿ ಶರ್ಮಿಳಾ ಮನೆಗೆ ಏಕಾಏಕಿ ಹಿಂದಿನಿಂದ ತಬ್ಬಿಕೊಂಡಿದ್ದ. ಗಾಬರಿಯಾದ ಶರ್ಮಿಳಾ ಆತನನ್ನು ತಳ್ಳಿ, ಬೈದಿದ್ದಳು. ಇದರಿಂದ ಕೋಪಗೊಂಡ ಆರೋಪಿ ಹಲ್ಲೆ ಮಾಡಿ, ತಲೆದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಳಿಕ ಗಾಬರಿಯಲ್ಲಿ ಅದೇ ತಲೆದಿಂಬಿಗೆ ಬೆಂಕಿ ಹಚ್ಚಿ, ಅಲ್ಲಿಂದ ಎಸ್ಕೇಪ್ ಆಗಿದ್ದ ಎಂದು ತಿಳಿದುಬಂದಿದೆ.


Spread the love
Share:

administrator

Leave a Reply

Your email address will not be published. Required fields are marked *