ಟಾಕ್ಸಿಕ್’ ಚಿತ್ರಕ್ಕಾಗಿ ಲಂಡನ್ಗೆ ಹಾರಿದ ಯಶ್

ರಾಕಿಂಗ್ ಸ್ಟಾರ್ ಯಶ್ ಅವರು ಇಷ್ಟು ದಿನ ಮುಂಬೈನಲ್ಲಿದ್ದರು. ಮುಂಬೈನಲ್ಲಿ ಹಾಕಲಾದ ಸೆಟ್ಗಳಲ್ಲಿ ‘ಟಾಕ್ಸಿಕ್’ ಸಿನಿಮಾ (Toxic) ಶೂಟ್ ಮಾಡಿದ್ದರು. ಇದಕ್ಕಾಗಿ ಹಾಲಿವುಡ್ ಆ್ಯಕ್ಷನ್ ಡೈರೆಕ್ಟರ್ ಕೂಡ ಬಂದಿದ್ದರು. ಮುಂಬೈನಲ್ಲಿ ಸಾಕಷ್ಟು ಆ್ಯಕ್ಷ್ ದೃಶ್ಯಗಳನ್ನು ಶೂಟ್ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಈಗ ಯಶ್ ಅವರು ನೇರವಾಗಿ ಲಂಡನ್ಗೆ ಹಾರಿದ್ದಾರೆ. ಅವರು ದೊಡ್ಡ ಕೊಲಾಬರೇಷನ್ ಮಾಡಿಕೊಳ್ಳಲು ತೆರಳಿದ್ದಾರೆ ಎನ್ನಲಾಗುತ್ತಿದೆ.

ಹಾಲಿವುಡ್ ಆ್ಯಕ್ಷನ್ ನಿರ್ದೇಶಕ ಜೆಜೆ ಪೆರ್ರಿ ಅವರು ಆಗಸ್ಟ್ನಲ್ಲಿ ಭಾರತಕ್ಕೆ ಬಂದಿದ್ದರು. ಅವರು ‘ಫಾಸ್ಟ್ ಆ್ಯಂಡ್ ಫ್ಯೂರಿಯಸ್’, ‘ಜಾನ್ ವಕ್’ ‘ಡೇ ಶಿಫ್ಟ್’ ರೀತಿಯ ಸಿನಿಮಾಗಳಿಗೆ ಫೈಟ್ ಹೇಳಿಕೊಟ್ಟಿದ್ದಾರೆ. ಅವರು ಕನ್ನಡ ಚಿತ್ರಕ್ಕಾಗಿ ಆಗಮಿಸಿದ್ದರು. ಮುಂಬೈನಲ್ಲಿ ಕಳೆದ ಒಂದು ತಿಂಗಳಿಂದ ಅವರು ನೆಲೆಸಿದ್ದರು. ಸಿನಿಮಾದಲ್ಲಿನ ಆ್ಯಕ್ಷನ್ ದೃಶ್ಯಗಳನ್ನು ಅವರೇ ನಿರ್ದೇಶಿಸಿದ್ದಾರೆ. ಈಗ ಈ ಶೆಡ್ಯೂಲ್ ಮುಗಿದಿದೆ. ಹೀಗಿರುವಾಗಲೇ ಯಶ್ ಅವರು ಮುಂಬೈನಿಂದ ಲಂಡನ್ಗೆ ತೆರಳಿದ್ದಾರೆ.
ಎಲ್ಲರಿಗೂ ಗೊತ್ತಿರುವಂತೆ ‘ಟಾಕ್ಸಿಕ್’ ಸಿನಿಮಾ ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಏಕಕಾಲಕ್ಕೆ ಶೂಟ್ ಆಗುತ್ತಿದೆ. ಉಳಿದ ಭಾಷೆಗಳಿಗೆ ಸಿನಿಮಾ ಡಬ್ ಆಗುತ್ತಿದೆ. ಈಗ ಯಶ್ ಲಂಡನ್ಗೆ ತೆರಳಿ ಅಲ್ಲಿರೋ ನಿರ್ಮಾಣ ಸಂಸ್ಥೆಗಳ ಜೊತೆ ಸಿನಿಮಾ ಹಂಚಿಕೆ ಬಗ್ಗೆ ಮಾತುಕತೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಈ ಮೂಲಕ ಚಿತ್ರವನ್ನು ವಿಶ್ವ ಮಟ್ಟದಲ್ಲಿ ರಿಲೀಸ್ ಮಾಡಲು ಈ ಮಾತುಕತೆ ತುಂಬಾನೇ ಪ್ರಾಮುಖ್ಯತೆ ಪಡೆದುಕೊಂಡಿದೆ.
ಈಗಾಗಲೇ ‘ಟಾಕ್ಸಿಕ್’ ಸಿನಿಮಾನ ಹಂಚಿಕೆ ಮಾಡುವ ವಿಚಾರಕ್ಕೆ ಸಂಬಂಧಿಸಿ ಅಮೆರಿಕದ ಕೆಲ ನಿರ್ಮಾಣ ಸಂಸ್ಥೆಗಳ ಜೊತೆ ಯಶ್ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ವರದಿ ಆಗಿದೆ. ಈಗ ಲಂಡನ್ಗೆ ತೆರಳಿ ಅವರು ಯಾವ ರೀತಿ ಡೀಲ್ ಖುದುರಿಸಿಕೊಂಡು ಬರುತ್ತಾರೆ ಎನ್ನುವ ಕುತೂಹಲ ಮೂಡಿದೆ.
‘ಟಾಕ್ಸಿಕ್’ ಸಿನಿಮಾಗೆ ಮಲಯಾಳಂನ ಗೀತು ಮೋಹನ್ದಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕನ್ನಡದ ಕೆವಿಎನ್ ಸಂಸ್ಥೆ ಚಿತ್ರಕ್ಕೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾ ಮುಂದಿನ ವರ್ಷ ಮಾರ್ಚ್ನಲ್ಲಿ ತೆರೆಗೆ ಬರಲಿದೆ. ಈ ಸಿನಿಮಾ ದೊಡ್ಡ ಮಟ್ಟದಲ್ಲಿ ಬಿಡುಗಡೆ ಕಾಣುತ್ತಿದೆ.
