ಬಿಜೆಪಿ ರಾಜ್ಯಾಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ: ಯತ್ನಾಳ್ ಬಣಕ್ಕೆ ತಿರುಗೇಟು ಕೊಟ್ಟ ಬಿವೈ ವಿಜಯೇಂದ್ರ
-
Sauram Tv
- . February 2, 2025
- 146 Views
-
Shares

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ಭಿನ್ನಮತ ಭುಗಿಲೆದ್ದಿರುವ ಬೆನ್ನಲ್ಲೇ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬಣ ರಾಜ್ಯಾಧ್ಯಕ್ಷ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಸಭೆ ನಡೆಸಿದೆ. ಈ ಬೆನ್ನಲ್ಲೇ ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದು ಹೇಳುವ ಮೂಲಕ ಶಾಸಕ ಯತ್ನಾಳ್ ಬಣಕ್ಕೆ ಬಿವೈ ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿಯಲ್ಲಿನ ಬಣ ರಾಜಕೀಯದಿಂದಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಈಗಾಗಲೇ ಈ ಒಂದು ಅಧ್ಯಕ್ಷ ಸ್ಥಾನಕ್ಕಾಗಿ ಹಲವು ಬಣಗಳು ಹುಟ್ಟಿಕೊಂಡಿದೆ. ಒಂದು ಕಡೆ ಬಿವೈ ವಿಜಯೇಂದ್ರ ಹಾಗೂ ಇನ್ನೊಂದು ಕಡೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ನಡುವೇ ವಾಕ್ಸಮರ ನಡೆಯುತ್ತಿದೆ. ಇದರ ಮಧ್ಯ ರಾಜ್ಯ ಬಿಜೆಪಿ ಅಧ್ಯಕ್ಷನಾಗಿ ನಾನೇ ಮುಂದುವರೆಯುತ್ತೇನೆ ಎಂದು ವಿಜಯೇಂದ್ರ ಅವರು ಹೇಳಿದ್ದಾರೆ.
ಈಗಾಗಲೇ ರಾಜ್ಯಾಧ್ಯಕ್ಷರ ಬದಲಾವಣೆಗಾಗಿ ಮಾಡು ಇಲ್ಲವೇ ಮಡಿ ಹೋರಾಟ ಮಾಡುತ್ತೇವೆ ಎಂದು ಬಂಡಾಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಘೋಷಣೆ ಮಾಡಿದ್ದಾರೆ. ಶುಕ್ರವಾರ ಸದಾಶಿವನಗರದಲ್ಲಿನ ಮಾಜಿ ಸಚಿವ ಕುಮಾರ್ ಬಂಗಾರಪ್ಪ ನಿವಾಸದಲ್ಲಿ ಸಭೆ ನಡೆಸಿದ ಬಸವನಗೌಡ ಪಾಟೀಲ್ ಯತ್ನಾಳ್ ಬಣದ ನಾಯಕರಾದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಮಾಜಿ ಶಾಸಕರಾದ ಬಿ.ಪಿ.ಹರೀಶ್, ಹೊಳಲ್ಕೆರೆ ಚಂದ್ರಪ್ಪ, ಮಾಜಿ ಸಂಸದರಾದ ಬಿ.ವಿ.ನಾಯಕ್, ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಇನ್ನಿತರರು ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಸಂಬಂಧ ಸಮಾಲೋಚನೆ ನಡೆಸಿದರು.
ಬಸವನಗೌಡ ಪಾಟೀಲ್ ಯತ್ನಾಳ್ ಬಣದಲ್ಲಿ ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರು ಅಭ್ಯರ್ಥಿಯಾಗಬೇಕು ಎನ್ನುವ ಕುರಿತು ವಿರೋಧಿ ಬಣ ಈಗಾಗಲೇ ಚರ್ಚೆ ನಡೆಸಿದ್ದು, ಒಮ್ಮತ ಅಭ್ಯರ್ಥಿಯನ್ನ ಎರಡು ದಿನಗಳಲ್ಲಿ ಆಯ್ಕೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ
ಇನ್ನೂ ರಾಜ್ಯಾಧ್ಯಕ್ಷ ಅಭ್ಯರ್ಥಿ ಕುರಿತು ಸಭೆ ನಡೆಸಿದ ಬಳಿಕ ಬಸನಗೌಡ ಪಾಟೀಲ್ ಯತ್ನಾಳ್ ಮಾಧ್ಯಮಗಳ ಜೊತೆಗೆ ಮಾತನಾಡಿ, ಬಿಜೆಪಿ ರಾಜ್ಯಾಧ್ಯಕ್ಷನಾಲು ನಾನು ಶೇ.100ಕ್ಕೆ ನೂರರಷ್ಟು ಸಿದ್ಧನಿದ್ದೇನೆ. ಎರಡು ಹಂತದಲ್ಲಿ ಸಭೆ ನಡೆಯಲಿದ್ದು, ತಟಸ್ಥ ಗುಂಪು ಪರಿವರ್ತನೆಯಾಗಿ ಪಕ್ಷ ನಿಷ್ಠರ ಗುಂಪು ಆಗಿ ಬದಲಾಗುತ್ತಿದೆ. ಪಕ್ಷವನ್ನು ಉಳಿಸುವ ಗುಂಪು ದೊಡ್ಡದಾಗುತ್ತಿದೆ ಎಂದು ತಿಳಿಸಿದರು. ಇನ್ನೂ ವಿಜಯೇಂದ್ರ ಅಧ್ಯಕ್ಷತೆಯನ್ನು ನಾವು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಯಾರನ್ನು ಇಳಿಸಬೇಕೆಂದು ಇನ್ನೂ ಅಂತಿಮ ತೀರ್ಮಾನ ಮಾಡಿಲ್ಲ. ಸರ್ವಾಧಿಕಾರಿ ಮನಸ್ಥಿತಿಯ ನಾಯಕತ್ವವನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಇದು ಅಂತ್ಯ ಆಗಲೇಬೇಕು. ಹೀಗಾಗಿ ನಾವು ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಸನ್ನದ್ಧವಾಗಿದ್ದೇವೆ ಎಂದು ಯತ್ನಾಳ್ ಗುಡುಗಿದ್ದಾರೆ.