ಮೆದುಳು ಜ್ವರ ಪೀಡಿತ ಯುವತಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್: ಜೀರೋ ಟ್ರಾಫಿಕ್‌ನಲ್ಲಿ ರವಾನೆ

ಶಿವಮೊಗ್ಗ: ಮೆದುಳು ಜ್ವರದಿಂದ ಬಳಲುತ್ತಿದ್ದ ಯುವತಿಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದಿಂದ ಮುಂಬೈಗೆ ಏರ್‌ಲಿಫ್ಟ್ ಮಾಡಲಾಯಿತು.

ನಗರದ ಗಾಂಧಿ ಬಜಾರ್‌ನ ಮನೋಜ್ ಹಾಗೂ ಮನಿಷಾ ದಂಪತಿಯ ಪುತ್ರಿ ಮಾನ್ಯ (22) ಮೆದುಳು ಜ್ವರದಿಂದ ಬಳಲುತ್ತಿದ್ದಳು. ಆಕೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆರೋಗ್ಯದ ಸ್ಥಿತಿ ಗಂಭೀರವಾದ ಹಿನ್ನೆಲೆ ವೈದ್ಯರ ಸಲಹೆಯಂತೆ ಮುಂಬೈನ ರಿಲಯನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.
ಯುವತಿಯನ್ನು ಆಸ್ಪತ್ರೆಯಿಂದ ವಿಮಾನ ನಿಲ್ದಾಣದವರೆಗೂ ಅಂಬುಲೆನ್ಸ್‌ನಲ್ಲಿ ಕರೆತರಲಾಯಿತು. ಈ ವೇಳೆ ಜೀರೋ ಟ್ರಾಫಿಕ್ ವ್ಯವಸ್ಥೆ ಮಾಡಲಾಗಿತ್ತು. ಬಳಿಕ ವಿಮಾನ ನಿಲ್ದಾಣದಿಂದ ಏರ್ ಅಂಬುಲೆನ್ಸ್ ಮೂಲಕ ಮುಂಬೈಗೆ ರವಾನೆ ಮಾಡಲಾಯಿತು.
ಮಾನ್ಯ ಕಳೆದ ಕೆಲವು ದಿನಗಳಿಂದ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದಳು ಎಂದು ತಿಳಿದು ಬಂದಿದೆ.
