ದೇವನಹಳ್ಳಿ ಫಾರ್ಮ್‌ಹೌಸ್‌ನಲ್ಲಿ ಯುವಕನ ಆತ್ಮಹತ್ಯೆ: ತಂದೆಯ ಬಂದೂಕಿನಿಂದ ಫೈರಿಂಗ್

ದೇವನಹಳ್ಳಿ: ತಂದೆಯ ಸಿಂಗಲ್ ಬ್ಯಾರಲ್ ಗನ್ನಿಂದ ಫೈರಿಂಗ್ ಮಾಡಿಕೊಂಡು ಮಗ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಗ್ರಾಮದಲ್ಲಿ ನಡೆದಿದೆ. ಇಂದು ಮುಂಜಾನೆ ಫಾರ್ಮ್‌ಹೌಸ್‌ನಲ್ಲಿ ಬೈಯೇಶ್(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೈಯೇಶ್ ಇತ್ತೀಚೆಗಷ್ಟೆ ವಿದೇಶದಲ್ಲಿ ವಿದ್ಯಾಭ್ಯಾಸ ಮುಗಿಸಿ ಬಂದಿದ್ದ. ಸದ್ಯ ಸ್ಥಳಕ್ಕೆ ತಿರುಮಲಶೆಟ್ಟಿಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ನಿನ್ನೆ ಮನೆಯ ಕುಟುಂಬಸ್ಥರು ಎಲ್ಲಾ ತಿರುಪತಿಗೆ ಹೋಗಿದ್ದಾರೆ. ಬೈಯೇಶ್ ಮನೆಯಲ್ಲಿ ಒಬ್ಬಂಟಿಯಾಗಿದ್ದರು. ಏಕಾಏಕಿ ಫೈರಿಂಗ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇಂದು ಮುಂಜಾನೆ ಕುಟುಂಬಸ್ಥರು ವಾಪಸ್ ಬಂದು ನೋಡಿದಾಗ ಆತ್ಮಹತ್ಯೆ ಬೆಳಕಿಗೆ ಬಂದಿದೆ.